ಹಾವೇರಿ | ದಲಿತ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ ಡಾ. ಬಾಬು ಜಗಜೀವನರಾಮ್: ಉಡಚಪ್ಪ ಮಾಳಗಿ

Date:

Advertisements

“ಹಸಿರು ಕ್ರಾಂತಿ ಹರಿಕಾರು, ದಲಿತ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ” ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವತಿಯಿಂದ 118 ನೇ  ಡಾ.ಬಾಬು ಜನಜೀವನರಾಮ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಡಾ.ಬಾಬು ಜಗಜೀವನರಾಮ್ ರಾಜಕೀಯ ಜೀವನ ಚರಿತ್ರೆಯಲ್ಲಿ ದಾಖಲು ಮಾಡುವಂತದಾಗಿದ್ದು, ಆಡು ಮುಟ್ಟದ ಸೊಪ್ಪಿಲ್ಲ ಜಗಜೀವನರಾಂ ಮುಟ್ಟದ ಖಾತೆಗಳೆ ಇಲ್ಲ.ಈ ದೇಶದ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚು ಖಾತೆಗಳನ್ನು ದಕ್ಷ ಪ್ರಾಮಾಣಿಕತೆ ಉತ್ತಮ ಗುಣಮಟ್ಟದ ಆಡಳಿತ ನೀಡಿದ ಕಿರ್ತಿಗೆ ಏಕೈಕ ವ್ಯಕ್ತಿತ್ವ ಬಾಬುಜಿ ಅವರದಾಗಿದೆ” ಎಂದು ಹೇಳಿದರು.

Advertisements

“ಜನಸಾಮಾನ್ಯರಿಗೂ ಸಮಾನತೆಯ ಕಲ್ಪನೆಯನ್ನು ಕಟ್ಟಿಕೊಟ್ಟರು. ಈ ದೇಶದಲ್ಲಿ ಡಾ.ಬಾಬು ಜೀವನರಾಮ್  ಅವರು ಉಪಪ್ರಧಾನಿಯಾಗಿದ್ದು ಇತಿಹಾಸ ನೆನಪು ಮಾಡುತ್ತಿದೆ. ಕೃಷಿ ಸಚಿವರಾಗಿ ಭೂ ಸುಧಾರಣೆ ತರಲು ಯತ್ನಿಸಿದ ವ್ಯಕ್ತಿ, ಹಸಿದ ದೇಶಕ್ಕೆ ಹಸಿರು ನೀಡಲು ಮುಂದಾದರು” ಎಂದು ಅವರ ಜೀವನದ ಬಗ್ಗೆ ಉಡಚಪ್ಪ ಮಾಳಗಿ ಹೇಳಿದರು.

ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಹೆಡಿಗೊಂಡ, ಜಗದೀಶ ಹರಿಜನ, ಬಸವಣ್ಣೆಪ್ಪ ಅಳ್ಳಳ್ಳಿ,ಹನಮಂತ ಹೌಂಶಿ,ಹನುಮಂತಪ್ಪ ಸಿ ಡಿ,ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಡಕ್ಕಣ್ಣನವರ, ಕಲಾ ತಂಡದ ಜಿಲ್ಲಾಧ್ಯಕ್ಷ ಬಸವರಾಜ ಕಾಳಿ, ಯಲ್ಲಮ್ಮ ಕೋಪುರ, ಗೀತಾ ಕಡೇಮನಿ, ಕನ್ನವ್ವ ಬಿಲ್ಲಣ್ಣನವರ, ಸುಮಂಗಲಾ ಹರಿಜನ, ನೇತ್ರಾ ದೊಡ್ಡಮನಿ, ಸರೋಜವ್ವ ಹರಿಜನ,ಅನ್ನಪೂರ್ಣ ಹರಕೇರಿ, ಮಂಜು ದೊಡ್ಡಮರಿಯಮ್ಮನವರ, ಹನುಮಂತಪ್ಪ ಹಲಗೇರಿ, ಮಂಜು ಬೆಳವಿಗಿ, ಪರಶುರಾಮ ಹಲಗೇರಿ, ನವೀನ ಸಿದ್ದಣ್ಣನವರ ಸೇರಿದಂತೆ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X