ತುಮಕೂರು | ಅಂಬೇಡ್ಕರ್ ಜಯಂತಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಲಹೆ

Date:

Advertisements

ತುಮಕೂರು  ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು. 

ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಸಲಹೆ ನೀಡಲಾಯಿತು. 

ದಲಿತ ಮುಖಂಡರು ಮಾತನಾಡಿ, ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿ ಹಾಗೂ ಮುಖಂಡರನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಬೇಕು. ನಗರದಾದ್ಯಂತ ಬಂಟಿಂಗ್ ಳನ್ನು ಅಳವಡಿಸಬೇಕು. ವೇದಿಕೆಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಆಚರಿಸುವುದರಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ತಲಾ 25 ಪ್ರಶಸ್ತಿಗಳನ್ನು ನೀಡಿ ಗೌರವಿಸಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಸಮುದಾಯಗಳು, ಸರ್ಕಾರಿ ಅಧಿಕಾರಿ/ಸಿಬ್ಬಂದಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಶಾಲಾ ಮಕ್ಕಳು, ರೈತರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಜಯಂತಿ ದಿನದಂದು ವಿದ್ಯಾರ್ಥಿಗಳಿಗೆ ಮಹನೀಯರ ವಿಚಾರಧಾರೆಗಳನ್ನು ತಿಳಿಸುವ ಸಲುವಾಗಿ ಪರಿಣಿತರಿಂದ ಉಪನ್ಯಾಸ ಏರ್ಪಡಿಸಬೇಕು. ವಿವಿಧ ಇಲಾಖೆಗಳ ಸೌಲಭ್ಯಗಳು ವಿತರಣೆಯಾಗಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಮಹನೀಯರ ಜೀವನ ಸಾಧನೆ ಕುರಿತ ಪುಸ್ತಕಗಳನ್ನು ವಿತರಿಸಬೇಕು ಎಂದು ಸಭೆಗೆ ವಿವಿಧ ಸಲಹೆಗಳನ್ನು ನೀಡಿದರು. 

Advertisements
1001264361

ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಯಕ್ರಮದ ಮಾರ್ಗನಕ್ಷೆ, ರೂಪುರೇಷೆಗಳ ಬಗ್ಗೆ ಮಾಹಿತಿ ನೀಡುತ್ತಾ, ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ದಿನಾಚರಣೆ ಸಂದರ್ಭದಲ್ಲಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಸುಮಾರು 30-40 ವರ್ಷಗಳ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಬೇಡಿಕೆ ಏಪ್ರಿಲ್ 14ರಂದು ಈಡೇರುತ್ತಿದೆ. ಪ್ರತಿಮೆಯು 1000 ಕೆ.ಜಿ. ತೂಕ, 12 ಅಡಿ ಎತ್ತರ ಹೊಂದಿದ್ದು, ಪ್ರತಿಮೆಯನ್ನು ಮಹಾನಗರಪಾಲಿಕೆ ಆವರಣದಲ್ಲಿ ಅನಾವರಣಗೊಳಿಸಲಾಗುವುದು. ಪ್ರತಿಮೆ ಅನಾವರಣಗೊಳಿಸಲು ಪ್ರಮುಖ ಕಾರಣಕರ್ತರಾದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು.

ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಪಾಲಿಕೆ ಆವರಣದವರೆಗೂ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆಯಲ್ಲಿ ಸ್ಥಳೀಯ ಜಾನಪದ ಕಲಾತಂಡ, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆಗೆ ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಸ್ಥಬ್ಧಚಿತ್ರಗಳು ಭಾಗವಹಿಸಲಿದ್ದು, ಸ್ಥಬ್ಧಚಿತ್ರಗಳ ಮೇಲೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ವಿಚಾರಧಾರೆಗಳ ಸಾಲುಗಳ ಫಲಕವನ್ನು ಅಳವಡಿಸಲಾಗುವುದು. ಸಂಜೆ 4.30 ಗಂಟೆಗೆ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ, ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 

1001264359

ದಿನಾಚರಣೆ ಅಂಗವಾಗಿ ದೇಶದ ಮೂಲೆ-ಮೂಲೆಯಿಂದ ಸಂಗ್ರಹಿಸಲಾದ ಅಂಬೇಡ್ಕರ್ ಅವರ ಸುಮಾರು 150 ಛಾಯಾಚಿತ್ರಗಳ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮುದಾಯದವರ ನಿರೀಕ್ಷೆಗಿಂತ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಕಾರ್ಯಕ್ರಮಕ್ಕೆ ಬಂದು ಹೋಗಲು ಅನುವಾಗುವಂತೆ ಜಿಲ್ಲೆಯ 330 ಗ್ರಾಮ ಪಂಚಾಯತಿಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆರವಣಿಗೆಗೆ ದಸರಾ ಮಾದರಿಯಲ್ಲಿ ಆನೆಯನ್ನು ಕರೆತರಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸಾಧನೆಗಳ ಕುರಿತ ಉಪನ್ಯಾಸ, ನೃತ್ಯರೂಪಕ, ಕ್ರಾಂತಿ ಗೀತೆ, ಲೇಸರ್ ಶೋ, ಬಾಣ-ಬಿರುಸು ಪ್ರದರ್ಶನ, ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. 

ಕಾರ್ಯಕ್ರಮವನ್ನು ಇತರರಿಗೆ ಮಾದರಿಯಾಗುವಂತೆ ಹಾಗೂ ರಾಜ್ಯದ ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುವಂತೆ ರೂಪಿಸಲಾಗುವುದು ಎಂದು ತಿಳಿಸಿದರು. 

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ದಲಿತ ಮುಖಂಡರು, ಮತ್ತಿತರ ಅಧಿಕಾರಿಗಳು, ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X