ತುಮಕೂರು | ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Date:

Advertisements

ಪದಾರ್ಥಗಳ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್‌ನ ಭಂಡ, ಮೊಂಡು ಸರ್ಕಾರ ಬೆಲೆ ಏರಿಕೆ ಮಾಡುತ್ತಲೇ ಜನರಿಗೆ ಒಂದರ ಮೇಲೊಂದರಂತೆ ಬರೆ ಎಳೆಯುತ್ತಲೇ ಇದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಬೆಲೆ ಏರಿಕೆ ವಿರುದ್ಧ ಬಿಜೆಪಿ ಆಹೋರಾತ್ರಿ ಧರಣಿ ನಡೆಸಿತು. ಅದೇ ದಿನ ರಾತ್ರಿ ಡೀಸೆಲ್ ಬೆಲೆ ಏರಿಸಿದ ಸರ್ಕಾರ ಭಂಡ ಸರ್ಕಾರ ಎಂದು ಟೀಕಿಸಿದರು.

ತನ್ನ ಅನಾಚಾರಗಳಿಗೆ ದುಡ್ಡು ಹೊಂದಿಸಲು ಬೆಲೆ ಏರಿಕೆ ಮಾಡಿ ರಾಜ್ಯದ ಜನರಿಗೆ ಹೊರೆ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹಾಲಿನ ಬೆಲೆ, ಡೀಸೆಲ್ ಬೆಲೆ, ಸ್ಟಾಂಪ್ ಡ್ಯೂಟಿ ಹೆಚ್ಚಳ ಹೀಗೆ ಒಂದಾದ ಮೇಲೆ ಒಂದರಂತೆ ಬೆಲೆ ಹೆಚ್ಚು ಮಾಡಿ ಜನರನ್ನು ಕಷ್ಟಕ್ಕೀಡುಮಾಡಿದೆ. 2 ಸಾವಿರ ರೂ. ಗ್ಯಾರಂಟಿ ಹಣ ನೀಡಿ ಅದೇ ಕುಟುಂಬದಿಂದ ಹತ್ತು ಸಾವಿರ ರೂ. ಕಿತ್ತುಕೊಳ್ಳುವ ಸರ್ಕಾರ ಎಂದು ಜ್ಯೋತಿಗಣೇಶ್ ಹರಿಹಾಯ್ದರು.

Advertisements

ಶಾಸಕ ಬಿ.ಸುರೇಶ್‌ಗೌಡರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರ ಸರ್ಕಾರ ಗಾಲಿ ಕುರ್ಚಿಯಲ್ಲಿ ತಳ್ಳಿಕೊಂಡು ಹೋಗುವಂತಹ ಪರಿಸ್ಥಿತಿ ತಲುಪಿದೆ. ಹೆಚ್ಚು ಬಾರಿ ಬಜೆಟ್ ಮಂಡನೆ, ಹೆಚ್ಚು ಅವಧಿಯ ಮುಖ್ಯ ಮಂತ್ರಿ ಎಂಬ ದಾಖಲೆ ಮಾಡಲು ಹೊರಟಿರುವ ಸಿದ್ದರಾಮಯ್ಯ ಈ ರಾಜ್ಯ ಕಂಡ ಅತ್ಯಂತ ಭ್ರಷ್ಟ, ದುರ್ಬಲ ಮುಖ್ಯಮಂತ್ರಿ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎರಡು ಬಾರಿ ಹಾಲು, ಕರೆಂಟು, ಡೀಸೆಲ್, ಮದ್ಯದ ಬೆಲೆಯನ್ನು ಏರಿಸಿದ್ದಾರೆ. ಹಾಲು, ನೀರಿನಿಂದ ಹಿಡಿದು ಕಸದವರೆಗೂ ತೆರಿಗೆ ವಿಧಿಸಿದೆ. ಗಾಳಿ ಒಂದನ್ನು ಬಿಟ್ಟು ಎಲ್ಲದಕ್ಕೂ ತೆರಿಗೆ ಹಾಕಿದೆ. ಈ ಕೆಟ್ಟ ಸರ್ಕಾರ ತೊಲಗಬೇಕೆಂದು ಜನ ಬಯಸುತ್ತಿದ್ದಾರೆ ಎಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ರೈತರಿಗೆ ಕೊಡುವುದಕ್ಕಾಗಿ ಹಾಲಿನ ಬೆಲೆ ಹೆಚ್ಚಿಸಲಾಗಿದೆ ಎನ್ನುವ ಕಾಂಗ್ರೆಸ್ ನಾಯಕರು, ಯಾವ ಹಣವನ್ನೂ ರೈತರಿಗೆ ಕೊಡುತ್ತಿಲ್ಲ, ಐದಾರು ತಿಂಗಳಿನಿಂದ ಹಾಲಿನ ಪ್ರೋತ್ಸಾಹ ಧನವನ್ನೇ ಕೊಟ್ಟಿಲ್ಲ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಾದ ಹಣವನ್ನು ಕಾಂಗ್ರೆಸ್‌ನವರು ಲೂಟಿ ಹೊಡೆದು ಈ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಅಗತ್ಯ ಪದಾರ್ಥಗಳ ಬೆಲೆ ಏರಿಕೆ ಮಾಡಿ ಬಡವರು, ಕೂಲಿ ಕಾರ್ಮಿಕರು ಬದುಕು ನಡೆಸಲಾಗದಂತಹ ಪರಿಸ್ಥಿಯನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪದಾರ್ಥಗಳ ಬೆಲೆ ನಿರಂತರವಾಗಿ ಏರುತ್ತಲೇ ಇದೆ. ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೂ ಯಾವುದೇ ರೀತಿಯಲ್ಲಿ ಹೆಚ್ಚುವರಿಯಾಗಿ ಹಾಲಿನ ದರ ನೀಡುತ್ತಿಲ್ಲ. ಸುಮಾರು 650 ಕೋಟಿ ರೂ. ಹಾಲಿನ ಪ್ರೋತ್ಸಾಹಧನವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದರು.

ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಕಿವಿ, ಕಣ್ಣು ಇಲ್ಲದ ರೀತಿ ಸರ್ಕಾರ ವರ್ತಿಸುತ್ತಿದೆ ಎಂದ ಅವರು, ಸರ್ಕಾರ ಕೂಡಲೇ ಏರಿಸಿರುವ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಹೆಚ್.ಎ.ಆಂಜನಪ್ಪ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ಯುವ ಮೋರ್ಚಾ ಅಧ್ಯಕ್ಷ ನವಚೇತನ್, ರಾಜ್ಯ ವಕ್ತಾರ ಹೆಚ್.ಎನ್.ಚಂದ್ರಶೇಖರ್, ನಗರ ಅಧ್ಯಕ್ಷ ಧನುಷ್, ಮುಖಂಡರಾದ ಅಂಜನಮೂರ್ತಿ, ಹನುಮಂತರಾಯಪ್ಪ, ಟಿ.ಹೆಚ್.ಹನುಮಂತರಾಜು, ಸಿದ್ಧಗಂಗಯ್ಯ, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಮಂಜುನಾಥ್, ಪ್ರತಾಪ್‌ಕುಮಾರ್, ಪುಟ್ಟರಾಜು, ಬನಶಂಕರಿಬಾಬು, ಜ್ಯೋತಿ ತಿಪ್ಪೇಸ್ವಾಮಿ, ವೆಂಕಟೇಶಾಚಾರ್, ಮರಿತಿಮ್ಮಯ್ಯ, ಕೊಪ್ಪಲ್ ನಾಗರಾಜು, ವಿಜಯಕುಮಾರ್, ಅಣ್ಣೇನಹಳ್ಳಿ ಶಿವಕುಮಾರ್, ಗಾಯತ್ರಿ, ವಸಂತ, ಹನುಮಂತರಾಜು ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X