ರಾಜ್ಯಾಧ್ಯಕ್ಷ ಸ್ಥಾನ | ಬಿಜೆಪಿಯ ಗರ್ಭಗುಡಿಗೆ ದಲಿತರಿಗೆ ಪ್ರವೇಶವಿಲ್ಲ: ಕಾಂಗ್ರೆಸ್‌

Date:

Advertisements
  • ದಲಿತರಿಗೆ ಉನ್ನತ ಸ್ಥಾನ ನೀಡಿ ಬಿಜೆಪಿ ತನ್ನ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ
  • ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಬಿಜೆಪಿಯಲ್ಲಿಲ್ಲ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೇ ನೀಡಿದ್ದೇನೆ ಎಂದು ಹೇಳಿಕೆ ನೀಡಿದ್ದ ನಳಿನ್‌ ಕುಮಾರ್ ಕಟೀಲ್‌, ಬಳಿಕ ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಬಿಜೆಪಿ ವಲಯದಲ್ಲಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಕಾಂಕ್ಷಿಗಳು ಪೈಪೋಟಿಗೆ ಇಳಿದಿದ್ದಾರೆ.

ಈ ನಡುವೆ “ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ?” ಎಂದು ಸಂಸದ ರಮೇಶ್​​ ಜಿಗಜಿಣಗಿ ಹೇಳಿಕೆ ನೀಡಿದ್ದರು.

ಸಂಸದ ರಮೇಶ್‌ ಜಿಗಜಿಣಗಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಟ್ವೀಟ್‌ ಮಾಡಿ ಬಿಜೆಪಿಯನ್ನು ಟೀಕಿಸಿದೆ.

Advertisements

“ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಕುರ್ಚಿಯ ಮೇಲೆ ಹತ್ತಾರು ಟವೆಲ್‌ಗಳು ಬಿದ್ದಿವೆ. ಹುದ್ದೆಯ ಆಸೆಗಾಗಿಯೇ ಪರಸ್ಪರ ಹೊಂದಾಣಿಕೆ ರಾಜಕೀಯದ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ದಲಿತರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಕೂಗೆದ್ದಿದೆ, ಆದರೆ ಇದು ವಿಫಲ ಕೂಗು, ಬಿಜೆಪಿಯ ಗರ್ಭಗುಡಿಗೆ ದಲಿತರಿಗೆ ಪ್ರವೇಶವಿಲ್ಲ” ಎಂದು ಕಾಂಗ್ರೆಸ್‌ ಕುಟುಕಿದೆ.

Screenshot 2023 06 26 154306

ಇಷ್ಟಕ್ಕೆ ಸುಮ್ಮನಾಗದ ಕಾಂಗ್ರೆಸ್‌, “ದಲಿತರಿಗೆ ಉನ್ನತ ಸ್ಥಾನ ನೀಡಿ ಬಿಜೆಪಿ ತನ್ನ ದಲಿತವಿರೋಧಿ ಕೃತ್ಯಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಅಭಿಪ್ರಾಯಪಟ್ಟಿದೆ.

ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ

“ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ. ಬಸನಗೌಡ ಪಾಟೀಲ್‌ ಯತ್ನಾಳ್‌ ಬಾಯಿ ತೆರೆದರೆ ಹೊಲಸು ಮಾತುಗಳು. ಆರ್‌ ಅಶೋಕ, ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ. ಸಿ ಎನ್‌ ಅಶ್ವತ್ಥನಾರಾಯಣ ಅವರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಇನ್ನು ಬಸವರಾಜ ಬೊಮ್ಮಾಯಿ ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ?” ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X