1999ರಲ್ಲಿ ನಡೆದಿದ್ದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿತ್ತು. ಪ್ರಕರಣ ಒಂದರಲ್ಲಿ ಬಂಧಿಸಲಾಗಿದ್ದ ಆರೋಪಿಯು ಪೊಲೀಸರ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ್ದರು. ಅವರನ್ನು ಪೊಲೀಸರು ಮತ್ತು ಇತರರು ಹೊಡೆದುಹೊಂದಿದ್ದಾರೆ. ಇದು ಕಸ್ಟಡಿ ಹತ್ಯೆಯೆಂದು ಆರೋಪಿಸಲಾಗಿತ್ತು.
ಆರೋಪಿಯ ಕಸ್ಟಡಿ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೋಪಿಗಳ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡಸಿರುವ ತೂತ್ತುಕುಡಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಪ್ರಕರಣದ ಆರೋಪಿಗಳಲ್ಲಿ ಇಬ್ಬರನ್ನು ಖುಲಾಸೆಗೊಳಿಸಿದೆ. ಉಳಿದ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದೆ. ಜೀವಾವಧಿ ಶಿಕ್ಷೆ ವಿಧಿಸಿದೆ.
ಅಲ್ಲದೆ, ಎಲ್ಲರಿಗೂ ತಲಾ 10,000 ರೂ. ದಂಡ ವಿಧಿಸಿದೆ.
ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಉಪ ಪೊಲೀಸ್ ವರಿಷ್ಠಾಧಿಕಾರಿಯು 1999ರಲ್ಲಿ ಲಮುತ್ತು ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದರು ಎಂದು ವರದಿಯಾಗಿದೆ.