ಕಳೆದ ವಾರ ಡಿಎಂಕೆ ಸಂಸದೆ ಕನಿಮೊಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಬಸ್ ಚಾಲಕಿಗೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಸೋಮವಾರ (ಜೂ.26) ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕೊಯಮತ್ತೂರಿನ ಮೊದಲ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ಕಮಲ್ ಕಲ್ಚರಲ್ ಸೆಂಟರ್ ವತಿಯಿಂದ ಚಾಲಕಿ ಹಾಗೂ ಉದ್ಯಮಿಯಾಗಲು ಅವಕಾಶ ಮಾಡಿಕೊಡುವ ಸಲುವಾಗಿ ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನೀಧಿ ಮಾಯಂ (ಎಂಎನ್‌ಎಂ) ಅಧ್ಯಕ್ಷರು ಆದ ಕಮಲ್ ಹಾಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಚಾಲಕಿಯಾಗಿ ಕಾರ್ಯನಿರ್ವಹಿಸುತ್ತ ತನ್ನ ವಯಸ್ಸಿನ ಮಹಿಳೆಯರಿಗೆ ಅತ್ಯುತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಅವರು ಇತ್ತೀಚಿಗೆ ಕೆಲಸ ಕಳೆದುಕೊಂಡ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಣಿಪುರದ ಬಗ್ಗೆ ಕಾಳಜಿಯಿದ್ದರೆ ಮೊದಲು ಮುಖ್ಯಮಂತ್ರಿಯನ್ನು ವಜಾ ಮಾಡಿ: ಪ್ರಧಾನಿಗೆ ಖರ್ಗೆ ಆಗ್ರಹ
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.