ಶಿವಮೊಗ್ಗ | ಆದಾಯ ಮೀರಿ ಆಸ್ತಿಗಳಿಕೆ; ಈಶ್ವರಪ್ಪ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್

Date:

Advertisements

ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಕೆಎಸ್ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.ಆದರೆ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ ಖಾಸಗಿ ದೂರು ಸಮರ್ಕವಾಗಿಲ್ಲವೆಂದು ವಜಾಗೊಳಿಸಿತ್ತು.

ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020ರಲ್ಲಿ ದೂರನ್ನು ಮರು ಪರಿಗಣನೆಗೆ ತೆಗೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಆದೇಶಿಸಿತ್ತು. ನಂತರ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

Advertisements

ಇದೀಗ, ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಖಾಸಗಿ ದೂರು ಮರುಪರಿಗಣಿಸಿ, ಸಿಆರ್‌ಪಿಸಿ 156 (3) ಅಡಿ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X