ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರವಿವಾರ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72), ಸಂಪತ್ ಕುಮಾರಿ(63) ಎಂದು ಗುರುತಿಸಲಾಗಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಧಾರವಾಡ | ಕೊಳಚೆ ಗುಂಡಿಯಲ್ಲೇ ಮುಳುಗಿದ; ಕುಂದಗೋಳದ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡ!
ಅಪಘಾತದಲ್ಲಿ ಗಾಯಗೊಂಡಿದ್ದವರ ಪೈಕಿ ಸಂಪತ್ ಕುಮಾರಿ ಮೃತಪಟ್ಟಿದ್ದಾರೆ. ವಿರೇಶ್ ಹಿರೇಮಠ ಚಿಕಿತ್ಸೆ ಪಡೆಯುತ್ತಿದ್ದಾರೆ.