ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

Advertisements

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

Advertisements

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ.ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು.

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X