ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್ 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.
ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದೆ. ಆದ್ದರಿಂದ ಏಪ್ರಿಲ್ 8ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ನಾಳೆ ಶಿಕ್ಷಣ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅದಾದ ಬಳಿಕ ಮಧ್ಯಾಹ್ನ 1 ಗಂಟೆ ಸುಮಾರಿಗೆ https://karresults.nic.in/ ಅಥವಾ https://kseab.karnataka.gov.in/ ರಲ್ಲಿ ಫಲಿತಾಂಶ ಪ್ರಕಟವಾಗಲಿದೆ.

2nd puc pass