ಈ ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯವರೇ ಗೃಹ ಸಚಿವರಾಗಿದ್ದರು. ಆದರೂ, ಜಿಲ್ಲೆಯಲ್ಲಿ ದಂಗೆಗಳು ನಡೆದವು. ಜಿಲ್ಲೆಯಲ್ಲಿ ನಡೆದ ಎಲ್ಲ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ರಾಜ್ಯದಲ್ಲಿ ಹಿಂದುಗಳ ಮೇಲಿನ ಗಲಾಟೆಗಳು, ದಾಳಿಗಳು ನಿಯಂತ್ರಣಕ್ಕೆ ಬರಲಿಲ್ಲ. ಬಿಜೆಪಿ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲಿನ ದಾಳಿ ಮತ್ತಷ್ಟು ಹೆಚ್ಚಾಗುತ್ತವೆ” ಎಂದರು.
“ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಮುಂದಾಗಿದೆ.1984ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಜಾರಿಗೆ ತಂದಿತ್ತು. ಆ ಕಾಯ್ದೆಗೆ ಬಿಜೆಪಿ ಕೆಲವು ಬದಲಾವಣೆಗಳನ್ನು ತಂದಿದೆ. ಅವರು ತಂದಿದ್ದ ಕಾಯ್ದೆಗೆ ಅವರೇ ವಿರೋಧ ಮಾಡುತ್ತಿದ್ದಾರೆ. ಕಾಯ್ದೆಯನ್ನು ರದ್ದು ಪಡಿಸಲು ನಾವು ಬಿಡುವುದಿಲ್ಲ. ರಾಜ್ಯಪಾಲರಿಗೆ ದೂರು ನೀಡುತ್ತೇವೆ” ಎಂದು ಹೇಳಿದರು.