ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ 20ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ 5 ವಿಕೆಟ್ ನಷ್ಟಕ್ಕೆ 221 ರನ್ ಕಲೆಹಾಕಿತ್ತು. ಬಳಿಕ 222 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
ಮುಂಬೈನ ನಾಯಕ ಹಾರ್ದಿಕ್ ಪಾಂಡ್ಯಾ ಒಂದು ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಗೆಲುವಿನ ಕಡೆಗೆ ಕೊಂಡೊಯ್ಯಲು ಪ್ರಯತ್ನಿಸಿದರಾದರೂ, ಕೊನೆಯ ಘಳಿಗೆಯಲ್ಲಿ ಅದೃಷ್ಟ ಕೈಕೊಟ್ಟ ಪರಿಣಾಮ ಬೆಂಗಳೂರು ವಿರುದ್ಧ ಸೋಲೊಪ್ಪಿಕೊಂಡಿತು. ಆರ್‌ಸಿಬಿ ಪರ ಕೊನೆಯ ಓವರ್ ಎಸೆದ ಕೃನಾಲ್ ಪಾಂಡ್ಯಾ ಮೂರು ವಿಕೆಟ್ ಪಡೆಯುವ ಪಡೆಯುವ ಮೂಲಕ ಹೀರೋ ಎನಿಸಿಕೊಂಡರು.
ಈ ಗೆಲುವಿನ ಮೂಲಕ ಆರ್‌ಸಿಬಿ ತಂಡವು ಮುಂಬೈ ವಿರುದ್ಧ ಸುದೀರ್ಘ 10 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಗೆಲುವು ಸಾಧಿಸಿ, ಇತಿಹಾಸ ಸೃಷ್ಟಿಸಿತು.
