ರಾಜ್ಯದ ಜನರಿಗೆ ಮತ್ತೊಂದು ಬಿಸಿ;ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ‌ ನಿರ್ಧಾರ

Date:

Advertisements

ಇತ್ತೀಚೆಗೆ ಬೆಲೆ ಏರಿಕೆ ವಿಚಾರ ಭಾಗಿ ಚರ್ಚೆ ಆಕ್ರೋಶಕ್ಕೆ‌ ಕಾರಣವಾಗಿದೆ. ಮೆಟ್ರೋ, ಹಾಲು, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ‌ ಏರಿಕೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳ ‌ವಿರುದ್ಧ ಭಾರೀ‌ ಆಕ್ರೋಶ ವ್ಯಕ್ತವಾಗಿತ್ತಿದೆ. ಈ ನಡುವೆ, ಈಗ ಖಾಸಗಿ ಬಸ್‌ಗಳ ಟಿಕೆಟ್ ದರವನ್ನೂ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ.

ಪೆಟ್ರೋಲ್, ಡೀಸೆಲ್‌ ದರ ಏರಿಕೆ ಹಾಗೂ ಟೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ‌ ಟಿಕೆಟ್ ದರ ಹೆಚ್ಚಸಲು ಖಾಸಗಿ ಬಸ್‌ಗಳ‌ ಮಾಲೀಕರು ಮುಂದಾಗಿದ್ದಾರೆ.

“ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರವೂ ಹೆಚ್ಚಾಗಿದೆ. ಬಸ್‌ಗಳನ್ನು ಓಡಿಸುವುದು ಹೊರೆಯಾಗುತ್ತಿದೆ. ಹೀಗಾಗಿ, ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮವೇ ಸ್ಥಗಿತಗೊಳ್ಳುತ್ತದೆ” ಎಂದು‌ ಖಾಸಗಿ‌ ಬಸ್ ಮಾಲೀಕರ ಸಂಘ ಹೇಳಿದೆ.

Advertisements

“ಟೋಲ್, ಡೀಸೆಲ್, ಸಿಬ್ಬಂದಿ‌ವೇತನ‌ ಸೇರಿದಂತೆ‌ ಪ್ರತಿ ಬಸ್​ ನಿರ್ವಹಣೆಗೆ ದಿನಕ್ಕೆ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚಾಗುತ್ತದೆ. ಬೆಲೆ ಏರಿಕೆಯು ಈ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗಾಗಿ, ದರ ಏರಿಕೆ ಮಾಡುವುದು‌ ಅನಿವಾರ್ಯವಾಗಿದೆ. ಪ್ರತಿ ಟಿಕೆಟ್ ಗರಿಷ್ಠ‌ 3 ರೂ. ಏರಿಕೆ ಮಾಡಲು ಚಿಂತನೆ‌ ನಡೆದಿದೆ. ಮುಂದಿನ ವಾರ ನಿರ್ಧರಿಸಿ, ನಿಗದಿ ಮಾಡಲಾಗುತ್ತದೆ” ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ್ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ ಒಟ್ಟು 8,000 ಖಾಸಗಿ ಬಸ್‌ಗಳು‌ ಪ್ರಯಾಣ ಸೇವೆ ಒದಗಿಸುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X