ಯುವನಿಧಿ | ಎಲ್ಲ ನಿರುದ್ಯೋಗಿ ಯುವಕರಿಗೂ ವಿಸ್ತರಿಸಿ: ಮುಖ್ಯಮಂತ್ರಿಗೆ ಎಐಡಿವೈಒ ನಿಯೋಗ ಮನವಿ

Date:

Advertisements
  • ನೇಮಕಾತಿಗಾಗಿ ಎಲ್ಲ ತರಹದ ಅರ್ಜಿ ಶುಲ್ಕಗಳನ್ನು ಕೈಬಿಡಬೇಕು
  • ದ್ವೇಷದ ರಾಜಕಾರಣ ಮಾಡುವವರ ವಿರುದ್ಧ ಕಠಿಣ ಕ್ರಮವಾಗಲಿ

ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗ ಭತ್ಯೆ ನೀಡುವ ʼಯುವನಿಧಿʼ ಯೋಜನೆಯನ್ನು ಹಲವು ವರ್ಷಗಳಿಂದ ನಿರುದ್ಯೋಗ ಸಮಸ್ಯೆಯಿಂದ ಪರಿತಪಿಸುತ್ತಿರುವ ಎಲ್ಲ ನಿರುದ್ಯೋಗಿ ಯುವಕರಿಗೂ ವಿಸ್ತರಿಸಬೇಕು ಎಂದು ಎಐಡಿವೈಒ (ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ) ಆಗ್ರಹಿಸಿತು.

ಎಐಡಿವೈಒ 58ನೇ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸಂಘಟನೆಯ ರಾಜ್ಯ ಸಮಿತಿಯ ನಿಯೋಗ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಿರುದ್ಯೋಗಿ ಯುವಕರ ಸಮಸ್ಯೆ ಕುರಿತು ಚರ್ಚಿಸಿತು.

ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಐದು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ 1,000 ರೂ. ದುಬಾರಿ ಅರ್ಜಿ ಶುಲ್ಕ ನಿಗದಿ ಮಾಡಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅದನ್ನು ವಾಪಸ್ಸು ಪಡೆಯುವಂತೆ ಮನವಿ ಸಲ್ಲಿಸಲಾಯಿತು.

Advertisements

“ನೇಮಕಾತಿಗಾಗಿ ನಡೆಯುವ ಪ್ರವೇಶ ಪರೀಕ್ಷೆ ಬರೆಯಲು ಹೋಗುವ ನಿರುದ್ಯೋಗಿ ಯುವಕರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿನ ಭ್ರಷ್ಟಾಚಾರ ತಡೆ ಹಾಗೂ ಯುವಜನರನ್ನು ದಾರಿ ತಪ್ಪಿಸುವ ವಿಚ್ಚಿದ್ರಕಾರಿ ಶಕ್ತಿಗಳನ್ನು ಮಟ್ಟಹಾಕಬೇಕು” ಎಂದು ನಿಯೋಗ ಕೋರಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರನ್ನು ಅಪಹಾಸ್ಯ ಮಾಡಿದರೆ, ಪರಿಣಾಮ ಎದುರಿಸಬೇಕಾದೀತು

ಹಾಗೆಯೇ “ದ್ವೇಷದ ರಾಜಕಾರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನೇಮಕಾತಿಗಾಗಿ ಎಲ್ಲ ತರಹದ ಅರ್ಜಿ ಶುಲ್ಕಗಳನ್ನು ಕೈಬಿಡಬೇಕು. ಯುವಜನತೆಯ ಸಾಂಸ್ಕೃತಿಕ ಅಧಃಪತನಕ್ಕೆ ಕಾರಣವಾದ ಮಾಧ್ಯಮಗಳಲ್ಲಿನ ಅಶ್ಲೀಲತೆ, ಮದ್ಯ ಮಾದಕ ವಸ್ತುಗಳಿಗೆ ಕಡಿವಾಣ ಹಾಕಬೇಕು” ಎಂಬ ಹತ್ತು ಬೇಡಿಕೆಗಳ ಆಗ್ರಹ ಪತ್ರವನ್ನು ನಿಯೋಗ ಮುಖ್ಯಮಂತ್ರಿಗಳಿಗೆ ಸಲ್ಲಿಸಿತು.

ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ್, ಉಪಾಧ್ಯಕ್ಷ ಡಾ. ಜಿ. ಶಶಿಕುಮಾರ್, ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷರಾದ ಕೃಷ್ಣ, ರಾಜ್ಯ ಖಜಾಂಚಿ ಜಯಣ್ಣ, ರಾಜ್ಯ ಸಮಿತಿ ಸದಸ್ಯರಾದ ರಾಜಶೇಖರ, ಪೂರ್ಣಿಮ ಹಾಗೂ ಸದಸ್ಯರಾದ ಅರುಣಕುಮಾರ್ ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X