ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗುತ್ತಿದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಗದಗ, ಹಾವೇರಿ, ಯಾದಗಿರಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ, ಮುಧೋಳ ಹಾಗೂ ವಿಜಯಪುರ ಜಿಲ್ಲೆಯ ಅಥಣಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ಚಂಡಮಾರುತ ಬೀಸುತ್ತಿದೆ. ಪರಿಣಾಮ ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿಯೂ ಮಳೆಯಾಗುತ್ತಿದೆ.