ರಾಯಚೂರು | ಕೊಲೆ ಪ್ರಕರಣ: ಮೂವರಿಗೆ ಗಲ್ಲು, ಒಂಬತ್ತು ಮಂದಿಗೆ ಜೀವಾವಧಿ

Date:

Advertisements

ಸಿಂಧನೂರು ತಾಲೂಕಿನಲ್ಲಿ‌ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ‌ಆದೇಶಿಸಿದೆ.

ಸಿಂಧನೂರು ಪೀಠಾಸೀನ ನ್ಯಾಯಾಧೀಶರಾದ ಬಿ.ಬಿ ಜಕಾತಿ ಅವರು ವಿಚಾರಣೆ ನಡೆಸಿ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ.

2020ರ ಜುಲೈ 11 ರಂದು ತನ್ನ ಮಗಳಾದ ಮಂಜುಳಾಳನ್ನು ಮೌನೇಶ ಎಂಬ ಯುವಕ ಪ್ರೀತಿಸಿದ ಎಂಬ ಕಾರಣಕ್ಕೆ ಜಿಲ್ಲೆಯ ಸಿಂಧನೂರು ನಗರದ ಸುಕಾಲಪೇಟೆಯ ಬಡಾವಣೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿ ಯುವಕನ ಮನೆಗೆ ನುಗ್ಗಿ ಆತನ ತಂದೆ ಈರಪ್ಪ, ಈರಪ್ಪನ ಪತ್ನಿ ಸುಮಿತ್ರಮ್ಮ, ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳು‌ ಶ್ರೀದೇವಿ ಅವರನ್ನು ಆರೋಪಿಗಳಾದ ಸಣ್ಣ ಫಕೀರಪ್ಪ ತಂದೆ ಸೋಮಪ್ಪ ಕೊನದವರ, ಅಂಬಣ್ಣ ಸೋಮಪ್ಪ ಕೋನದವರ, ಸೋಮಶೇಖರ ತಂದೆ ಹಿರೇಫಕೀರಪ್ಪ ಸೇರಿಕೊಂಡು ಅಕ್ರಮ‌ ಕೂಟ ರಚಿಸಿ ಬಡಿಗೆಗಳಿಂದ ಹೊಡೆದು 5 ಜನರನ್ನು ಕೊಲೆ ಮಾಡಿದ್ದರು.

Advertisements

ರೇಖಾ, ಗಂಗಮ್ಮ, ದೊಡ್ಡ ಫಕೀರಪ್ಪ, ಸೋಮಪ್ಪ ಕೊನದವರ, ಹನುಮಂತಪ್ಪ, ಸೋಮಪ್ಪ, ಹೋನೂರಪ್ಪ, ಸೋಮಪ್ಪ, ಬಸವಲಿಂಗಪ್ಪ ದೊಡ್ಡ ಫಕೀರಪ್ಪ, ಅಮರೇಶ, ಬಸಬಲಿಂಗಪ್ಪ, ದೊಡ್ಡ ಫಕೀರಪ್ಪ ಅವರು ಕೊಲೆಯಲ್ಲಿ ಭಾಗಿಯಾಗಿದ್ದರು. ಘಟನೆಯಲ್ಲಿ ಈರಪ್ಪನ ಸೊಸೆ ರೇವತಿ ಹಾಗೂ ಮಗಳು ತಾಯಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು

ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಸಿಪಿಐ ಬಾಲಚಂದ್ರ ಲಖ್ಕಂ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಸಾಕ್ಷಿ, ದಸ್ತಾವೇಜುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಅಪರಾಧಿ ಸಣ್ಣ ಫಕೀರಪ್ಪ, ಅಂಬಣ್ಣ ಸೋಮಶೇಖರ, ಪರಸಪ್ಪ ಹಾಗೂ ಶಿವರಾಜ್ ಅವರಿಗೆ ಗಲ್ಲು ಶಿಕ್ಷೆ ಹಾಗೂ 47 ಸಾವಿರ ರೂಪಾಯಿ ದಂಡ ಹಾಗೂ 9 ಆರೋಪಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 97,500 ರೂ ದಂಡ ವಿಧಿಸಿದೆ.

ಸರ್ಕಾರದ ಪರವಾಗಿ ಅಭಿಯೋಜನ ಆರ್ ಎ.ಗಡಕರಿ ವಾದ ಮಂಡಿಸಿದ್ದರು. ಮಹಿಳಾ ಪಿ.ಸಿ ಕೆಂಚಮ್ಮ, ಪಿಸಿ ಬೂದೆಪ್ಪ‌ ಸರಿಯಾದ ಸಮಯಕ್ಕೆ ಸಾಕ್ಷಿದಾರರನ್ನು‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಕುರಿತು ಎಸ್ ಪಿ.‌ಎಂ ಪುಟ್ಟಮಾದಯ್ಯ ಅವರು ಮಾತನಾಡಿ, ಪೊಲೀಸರು ಸಕಾಲಕ್ಕೆ ಸರಿಯಾಗಿ ತನಿಖೆ ನಡೆಸಿ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರಿಂದ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X