ಉಡುಪಿ | ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಕೈ ಬಿಡುವಂತೆ ಸಿಐಟಿಯು ಒತ್ತಾಯ

Date:

Advertisements

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇತ್ತೀಚೆಗೆ ಟೋಲ್ ದರ, ಮೆಟ್ರೋ ದರ, ಡೀಸೆಲ್ ದರ ಹೆಚ್ಚಳ ಹಾಗೂ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಜನಸಾಮಾನ್ಯರು ತತ್ತರಿಸಿ ಹೋಗಿರುತ್ತಾರೆ ಅದರ ಮಧ್ಯೆ ಡೀಸೆಲ್ ದರ, ಟೋಲ್ ದರ ನೆಪದಲ್ಲಿ ಖಾಸಗಿ ಬಸ್ ದರ ಏರಿಕೆ ಮಾಡುವುದನ್ನು ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ ಖಂಡಿಸುತ್ತದೆ ಈ ಕೂಡಲೇ ಟಿಕೆಟ್ ದರ ಹೆಚ್ಚಳ ಕುರಿತು ನಿರ್ಧಾರವನ್ನು ಕೈ ಬಿಡಬೇಕು ಎಂದು ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರತಿ ಬಾರಿಯೂ ಡೀಸೆಲ್ ಬೆಲೆ ಏರಿಕೆ ಯಾಗುವ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಮಾತಾನಾಡದೇ ಜನಸಾಮಾನ್ಯರ, ವಿದ್ಯಾರ್ಥಿಗಳ, ಕಾರ್ಮಿಕರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಈಗಾಗಲೇ ಸರಕಾರಗಳ ದ್ವಂದ್ವ ನೀತಿಗಳಿಂದ ಜನಸಾಮಾನ್ಯರು, ಕಾರ್ಮಿಕರು, ಮಧ್ಯಮ ವರ್ಗದ ಜನರು ಕಷ್ಟಪಡುತ್ತಿದ್ದಾರೆ.

ಇತ್ತೀಚೆಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚಲ್ಪಟ್ಟಿದ್ದು ಈ ಹಿಂದೆ ಉಡುಪಿ ಮಂಗಳೂರು ಮಧ್ಯೆ 5ರೂ ಟಿಕೆಟ್ ದರ ಮಾಲೀಕರು ಹೆಚ್ಚಳ ಮಾಡಿದ್ದು, ಟೋಲ್ ಗೇಟ್ ಮುಚ್ಚಿದ ನಂತರ ಟಿಕೆಟ್ ದರವನ್ನು ಮಾಲೀಕರು ಕಡಿಮೆ ಮಾಡಲಿಲ್ಲ ಈಗ ಮತ್ತೆ ಟೋಲ್ ದರ, ಡೀಸೆಲ್ ದರ, ಸೆಸ್ ನೆಪದಲ್ಲಿ ಬಸ್ ಟಿಕೆಟ್ ದರ ಹೆಚ್ಚಳಮಾಡುವ ಕ್ರಮ ಸರಿಯಲ್ಲ ಮಾತ್ರವಲ್ಲದೆ RTO ಅಧಿಕಾರಿಗಳ ಗಮನಕ್ಕೂ ಬಾರದೆ, ಜಂಟಿ ಸಭೆಯು ನಡೆಸದೆ ಖಾಸಗಿ ಬಸ್ ಮಾಲೀಕರು ದರ ಹೆಚ್ಚಳ ಮಾಡುವುದು ಬಡ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ಮಾಡಿದ ದ್ರೋಹ. ಈ ಕೂಡಲೇ ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ದರ ಏರಿಕೆ ಪ್ರಸ್ತಾಪವನ್ನು ಕೈಬೀಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗದ ಕಾರ್ಮಿಕರು, ವಿದ್ಯಾರ್ಥಿಗಳು, ಜನಸಾಮಾನ್ಯರು ಒಟ್ಟು ಸೇರಿ ತೀವ್ರವಾದ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ‌.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X