ಕೇಂದ್ರ ಸರ್ಕಾರ ಏರಿಸಿರುವ ಅಡುಗೆ ಅನಿಲ ದರ ಅತಿ ಕಡಿಮೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Date:

Advertisements
  • ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ
  • ಮಂಡ್ಯದ ಜನರು ಛತ್ರಿಗಳಲ್ಲ, ಚಕ್ರವರ್ತಿಗಳು. ಒಂದೇ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಸಾಲ

ಅತಿ ಕನಿಷ್ಠ ಮಟ್ಟದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನವರು ಬೇಕಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ. ಇಡೀ ದೇಶದಲ್ಲಿ ಅಡುಗೆ ಅನಿಲ ಏರಿಕೆಯಾಗಿದೆಯೇ ಹೊರತು ಕರ್ನಾಟಕಕ್ಕೆ ಮಾತ್ರ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದುಕೊಳ್ಳಬೇಕು. ಅಡುಗೆ ಅನಿಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿ ಹೆಚ್ಚು ಸಹಾಯಧನ ನೀಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡುಗೆ ಅನಿಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿ ಹೆಚ್ಚು ಸಹಾಯಧನ ನೀಡುತ್ತಿದೆ. ಅತಿ ಕನಿಷ್ಠ ಮಟ್ಟದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನವರು ಬೇಕಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ ಎಂದರು.

ಕಾಂಗ್ರೆಸ್‌ ಸರ್ಕಾರ ಚುನಾವಣೆಗೆ ಮುನ್ನ ಗ್ಯಾರಂಟಿಗಳ ಹಣ ಬಿಡುಗಡೆ ಮಾಡಿ ಜನರಿಗೆ ಆಮಿಷ ಒಡ್ಡುತ್ತಿದೆ. ಹಾಲು, ಮದ್ಯ, ಆಸ್ಪತ್ರೆ ಶುಲ್ಕ, ಬಸ್‌ ಟಿಕೆಟ್‌ ದರ, ಮಾರ್ಗಸೂಚಿ ದರ ಎಲ್ಲ ಸೇರಿದರೆ ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆಯನ್ನು ಹಾಕಲಾಗಿದೆ. ಗ್ಯಾರಂಟಿಗಳ 65 ಸಾವಿರ ಕೋಟಿ ರೂ. ಹೊಂದಿಸಲು ಹೀಗೆ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಇವರು ಜನರಿಗೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಮುಸ್ಲಿಮರು, ನಂತರ ಕ್ರೈಸ್ತರು… ಆನಂತರ?

ರಾಜ್ಯ ಸರ್ಕಾರದಲ್ಲಿ ಸರ್ಕಾರಿ ನೌಕರರಿಗೂ ವೇತನ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಸಂಬಳ ಕೊಡಲು ಹಣವಿಲ್ಲ ಎಂದಮೇಲೆ ಈ ಸರ್ಕಾರ ದಿವಾಳಿಯಾಗಿದೆ ಎಂದೇ ಹೇಳಬೇಕು. ಒಂದೇ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಪಾಪರ್‌ ಆಗಿಲ್ಲವಾದರೆ ಸಾಲ ಏಕೆ ಮಾಡಬೇಕು? ಕೇಜ್ರಿವಾಲ್‌ ಅವರನ್ನು ಮೀರಿಸುವಂತೆ ಅಬಕಾರಿ ಹಗರಣ ರಾಜ್ಯದಲ್ಲಿ ನಡೆಯುತ್ತಿದೆ ಎಂದು ದೂರಿದರು.

ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಭೂ ಹಗರಣವನ್ನು ಪೊಲೀಸರು ತನಿಖೆ ಮಾಡುವುದನ್ನು ನೋಡಿದರೆ ಕಾಂಗ್ರೆಸ್‌ ದ್ವೇಷ ಸಾಧಿಸುತ್ತಿದೆ ಎಂದು ಗೊತ್ತಾಗುತ್ತದೆ. ಕುಮಾರಸ್ವಾಮಿ ಅವರ ಕಾನೂನು ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡುತ್ತೇವೆ ಎಂದರು.

ಜೆಡಿಎಸ್‌-ಬಿಜೆಪಿ ಒಟ್ಟಾಗಿ ಹೋರಾಟ ಮಾಡುವುದರ ಬಗ್ಗೆ ಚರ್ಚೆಯಾಗಬೇಕಿದೆ. ಈ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಹಾಗೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಮಂಡ್ಯದ ಜನರು ಛತ್ರಿಗಳಲ್ಲ

ಬಿಜೆಪಿ ಜನಾಕ್ರೋಶ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 14 ಸೈಟು ಲೂಟಿ ಮಾಡಿ, ಬಿಜೆಪಿ ಹೋರಾಟ ಮಾಡುತ್ತಿದ್ದಂತೆ ವಾಪಸು ಮಾಡಿದರು. ವಾಲ್ಮೀಕಿ ನಿಗಮದ ಅಕ್ರಮದ ವಿರುದ್ಧದ ಹೋರಾಟದಿಂದ ಸಚಿವರು ರಾಜೀನಾಮೆ ನೀಡಿದರು. ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಮಂಡ್ಯದ ಜನರನ್ನು ಛತ್ರಿ ಎಂದು ಜರಿದಿದ್ದಾರೆ. ಅದೇ ಚುನಾವಣೆಯ ಸಮಯದಲ್ಲಿ ಮತಭಿಕ್ಷೆ ಬೇಡಿದ್ದರು. ಮಂಡ್ಯದ ಜನರು ಛತ್ರಿಗಳಲ್ಲ, ಚಕ್ರವರ್ತಿಗಳು. ಮುಂದಿನ ಚುನಾವಣೆಯಲ್ಲಿ ಮಂಡ್ಯದ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದರು.

ಮೇಕೆದಾಟು ಯೋಜನೆ ಜಾರಿ ಬಗ್ಗೆ ಕಾಂಗ್ರೆಸ್‌ ನಾಯಕರು ಹೇಳಿದ್ದರು. ಆದರೆ ಅಧಿಕಾರ ಸಿಕ್ಕರೂ ಇನ್ನೂ ದಾಟಿಲ್ಲ. ತಮಿಳುನಾಡಿನ ಸ್ಟಾಲಿನ್‌ ಬ್ರದರ್‌ ಎಂಬ ಕಾರಣಕ್ಕೆ ಇವರು ಸುಮ್ಮನಾಗಿದ್ದಾರೆ. ಮಂಡ್ಯದಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಮೋದಿ ಸರ್ಕಾರ ಅನುದಾನ ನೀಡಿದ್ದರೆ, ಆ ಹಣವನ್ನು ತಿಂದು ವಿವಿ ರದ್ದು ಮಾಡಿದ್ದಾರೆ. ಇಲ್ಲಿ ಹನುಮ ಧ್ವಜವನ್ನು ಹಾರಿಸಲು ಹೊರಟರೆ ಅದಕ್ಕೂ ಅವಕಾಶ ನೀಡಲಿಲ್ಲ. ಆದರೂ ಡಿ.ಕೆ.ಶಿವಕುಮಾರ್‌ ಹಿಂದೂ ಎಂದು ಹೇಳಿಕೊಳ್ಳುತ್ತಾರೆ ಎಂದು ಟೀಕಿಸಿದರು.

ಮಂಡ್ಯದ ಜನರಿಗೆ ಕಾಂಗ್ರೆಸ್‌ ದೊಡ್ಡ ಮೋಸ ಮಾಡಿದೆ. ಮುಸ್ಲಿಮರಿಗೆ ಮದುವೆಯಾಗಲು ಕೂಡ ಕೂಡಲೇ ಹಣ ನೀಡುತ್ತಾರೆ. ಸರ್ಕಾರಿ ಗುತ್ತಿಗೆಯಲ್ಲೂ ಮೀಸಲು ನೀಡಿದ್ದಾರೆ. ಹಿಂದೂಗಳಿಗೆ ಮಾತ್ರ ಚೊಂಬು ಕೊಟ್ಟಿದ್ದಾರೆ. ಸಮಬಾಳು, ಸಮಪಾಲು ಎಂದು ಬಿಜೆಪಿ ಹೇಳಿದರೆ, ಕಾಂಗ್ರೆಸ್‌ ಎಲ್ಲವನ್ನೂ ಮುಸ್ಲಿಮರಿಗೆ ಮಾತ್ರ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶೋಕ ಬಿಜೆಪಿ ಬೆಲೆ ಏರಿಕೆ1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X