ಬಾಗಲಕೋಟೆ | ಕುರಿಗಾಹಿಗಳಿಗೆ ಆತ್ಮರಕ್ಷಣೆ ತರಬೇತಿಯ ಅಗತ್ಯವಿದೆ: ಡಿಸಿ ಜಾನಕಿ

Date:

Advertisements

ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲೆಯ ನವನಗರದ ಪೊಲೀಸ್ ಮಂಗಲ ಭವನದಲ್ಲಿ ಕುರಿಗಾಹಿಗಳಿಗಾಗಿ ಆಯೋಜಿಸಿದ್ದ ಬಂದೂಕು ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, “ಮಳೆ, ಬಿಸಿಲು ಎನ್ನದೆ ಗುಡ್ಡಗಾಡು ಪ್ರದೇಶಗಳಲ್ಲಿ ಒಬ್ಬಂಟಿಯಾಗಿ ತಮ್ಮ ಕುರಿಗಳನ್ನು ಮೇಯಿಸುತ್ತಾರೆ. ಈ ಹಿನ್ನೆಲೆ ಕುರಿಗಾಹಿಗಳು ಮತ್ತು ಅವರ ಕುರಿಗಳ ರಕ್ಷಣೆಗೆ ಸಹಾಯವಾಗುವಂತೆ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಕುರಿಗಾಹಿಗಳು ತಮ್ಮ ಕುರಿಗಳನ್ನು ಬೇರೆ ಬೇರೆ ಪ್ರದೇಶಗಳಿಗೆ ಮೇಯಿಸಲು ಹೋಗುವ ಸಂದರ್ಭದಲ್ಲಿ ಅವರ ರಕ್ಷಣೆಗಾಗಿ ಬಂದೂಕು ತರಬೇತಿ ನೀಡಲಾಗುತ್ತಿದೆ. ತರಬೇತಿಯಲ್ಲಿ ಏಕಾಗ್ರತೆಯಿಂದ ಪಾಲ್ಗೊಂಡು, ಉತ್ತೀರ್ಣರಾಗಿ ಬಂದೂಕು ಪರವಾ ನಗಿ ಪಡೆಯಬೇಕೆಂದರು.ಬಂದೂಕು ಜತೆ ನಡವಳಿಕೆ ಯಲ್ಲಿ ಅತ್ಯಂತ ಸೂಕ್ಷ್ಮತೆ ಅಗತ್ಯವಾಗಿದೆ. ಬಂದೂ ಕು ಭಾವನೆ ರಹಿತವಾಗಿದೆ. ಅದು ಜೀವಕ್ಕೆ ಅಪಾಯ ತರಬಲ್ಲದು. ಬಂದೂಕನ್ನು ಸರಿಯಾಗಿ ಇಟ್ಟುಕೊಳ್ಳ ಬೇಕು. ಫೋಟೋಗೆ ಇಲ್ಲವೆ ಪ್ರದರ್ಶನಕ್ಕಾಗಿ ಸ್ನೇಹಿತರಿಗೆ ಕೊಡಬಾರದು” ಎಂದು ಎಚ್ಚರಿಸಿದರು.

Advertisements

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, “ಏಪ್ರಿಲ್ 13ರವರೆಗೆ ನಡೆಯುತ್ತಿರುವ ಈ ಶಿಬಿರದಲ್ಲಿ 500ಕ್ಕೂ ಹೆಚ್ಚು ಕುರಿಗಾಹಿಗಳು ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಗುರಿ ನಿಖರವಾಗಿ ಹೇಗೆ ಇಡಬೇಕು. ಬಂದೂಕು ಹಸ್ತಾಂತರಿಸುವ ವಿಧಾನ, ಕಾನೂನು ನಿಯಮಗಳು ಮತ್ತು ಶಿಸ್ತು ಕುರಿತು ತರಬೇತಿ ನೀಡಲಾಗುತ್ತಿದೆ. ತರಬೇತಿಯನಂತರ ಕಾಡುಪ್ರಾಣಿಗಳಿಗೆ ಯಾವುದೇ ರೀತಿಯತೊಂದರೆ ನೀಡಬಾರದು. ದುರುಪಯೋಗ ಪಡಿಸಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ಹೇಳಿದರು. ಶಿಬಿರದಲ್ಲಿ ಮೂರು ಮಹಿಳೆಯರು ಸಹ ಭಾಗವಹಿಸಿದ್ದರು.

ಇದನ್ನೂ ಓದಿ: ಬಾಗಲಕೋಟೆ | ಈದ್ ಮಿಲನ್ ಕಾರ್ಯಕ್ರಮ ಯಶಸ್ವಿ

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರೆ, ಕಾಶಿನಾಥ್ ಹುಡೇದ, ಹಾಲುಮತ ಸಮಾಜದ ರಾಜ್ಯ ಕಾರ್ಯದರ್ಶಿ ಸುವರ್ಣ, ತರಬೇತಿದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X