ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ ವಿಭಾಗದಲ್ಲಿ ಅಧ್ಯಯನ ಮಾಡಿರುವ ಆಶಿಫಾ ಹುಸೈನ್, ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದರು. ಇಂದು ಫಲಿತಾಂಶ ಪ್ರಕಟಗೊಂಡಿದ್ದು, 100 ಕ್ಕೆ 96 ಅಂಕಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. ಆ ಮೂಲಕ ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿದ್ದಾಳೆ.
ಇದನ್ನು ಓದಿದ್ದೀರಾ? ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ
ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ಅಮ್ಚಿನಡ್ಕ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಸುಪುತ್ರಿಯಾಗಿದ್ದಾರೆ.