ಫಿಫಾ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾದ ಗಿಯಾನಿ ಇನ್ಫಾಂಟಿನೋ

Date:

Advertisements
  • ರವಾಂಡ ರಾಜಧಾನಿ ಕಿಗಾಲಿಯಲ್ಲಿ ನಡೆದ ಸಭೆ
  • 2027ರವರೆಗೆ ಇನ್ಫಾಂಟಿನೋ ಅಧಿಕಾರ ಅವಧಿ

ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ, ಫಿಫಾದ ಅಧ್ಯಕ್ಷರಾಗಿ ಗಿಯಾನಿ ಇನ್ಫಾಂಟಿನೋ ಮರು ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಫಿಫಾ ಕಾಂಗ್ರೆಸ್‌ನಲ್ಲಿ 211 ಸದಸ್ಯರು ಭಾಗವಹಿಸಿದ್ದು, ಸ್ವಿಜರ್‌ಲ್ಯಾಂಡ್‌ನ ವಕೀಲರಾದ ಇನ್ಫಾಂಟಿನೋ ಅವಿರೋಧವಾಗಿ ಆಯ್ಕೆಯಾದರು. 52 ವರ್ಷದ ಗಿಯಾನಿ 2027ರವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.

ರವಾಂಡ ರಾಜಧಾನಿ ಕಿಗಾಲಿಯಲ್ಲಿ ನಡೆದ ಸಭೆಯ ಬಳಿಕ ಪ್ರತಿಕ್ರಿಯಿಸಿದ ಗಿಯಾನಿ ಇನ್ಫಾಂಟಿನೋ, “ನನ್ನನ್ನು ಇಷ್ಟಪಡುವವರು ಮತ್ತು ನನ್ನನ್ನು ಧ್ವೇಷಿಸುವವರ ಬಳಿ ಒಂದು ಮಾತನ್ನು ಹೇಳಲು ಇಚ್ಛಿಸುತ್ತೇನೆ. ಅದೇನೆಂದರೆ, ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ. ಫಿಫಾದ ನೂತನ ನಿಯಮಾವಳಿಗಳ ಪ್ರಕಾರ ಹೊಸ ಅಧ್ಯಕ್ಷರ ಅಧಿಕಾರವಧಿ 3 ವರ್ಷಗಳಾಗಿರಲಿದೆ.

ಕತಾರ್‌ ವಿಶ್ವಕಪ್‌ ಆತಿಥ್ಯ ಪಡೆಯುವಲ್ಲಿ ಗಿಯಾನಿ ಇನ್ಫಾಂಟಿನೋ ಸಹಾಯ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ವಲಸೆ ಕಾರ್ಮಿಕರು, ಮಹಿಳೆಯರು ಹಾಗೂ ಎಲ್‌ಜಿಬಿಟಿಕ್ಯೂ ಸಮುದಾಯದ ಕುರಿತಾಗಿ ಕತಾರ್‌ ತೆಗದುಕೊಂಡ ನಿರ್ಧಾರಗಳ ವಿರುದ್ಧವೂ ಟೀಕೆ ವ್ಯಕ್ತವಾಗಿತ್ತು. ಆದರೆ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಕತಾರ್‌ ಮತ್ತು ಫಿಫಾ ಅದ್ಧೂರಿ ಮತ್ತು ಯಶಸ್ವಿಯಾಗಿ ವಿಶ್ವಕಪ್‌ ಆಯೋಜಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿತ್ತು. ಇನ್ಫಾಂಟಿನೋ ಅವಧಿಯಲ್ಲಿ ಫಿಫಾದ ಆದಾಯದಲ್ಲೂ ಭಾರಿ ಏರಿಕೆಯಾಗಿದೆ. 2022ರಲ್ಲಿ ಕೊನೆಗೊಳ್ಳುವ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ $7.5 ಶತಕೋಟಿ ಆದಾಯ ಗಳಿಸಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ಇದು $11 ಶತಕೋಟಿ ದಾಟಲಿದೆ ಎಂದು ಇನ್ಫಾಂಟಿನೋ ಘೋಷಿಸಿದ್ದಾರೆ.

Advertisements

2015ರಲ್ಲಿ ಅಧ್ಯಕ್ಷರಾಗಿದ್ದ ಸೆಪ್ ಬ್ಲಾಟರ್ ಅವರನ್ನು ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿಫಾದ ನೈತಿಕ ಸಮಿತಿಯು ಎಂಟು ವರ್ಷಗಳ ಕಾಲ ನಿಷೇಧಿಸಿತ್ತು. ಇದರ ವಿರುದ್ಧ ಕ್ರೀಡಾ ನ್ಯಾಯಾಲಯದಲ್ಲಿ ಬ್ಲಾಟರ್‌ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕೃತಗೊಂಡಿತ್ತು. ಬಳಿಕ ಗಿಯಾನಿ ಇನ್ಫಾಂಟಿನೋ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಮುಂದಿನ ಆವೃತ್ತಿಯ ಪುರುಷರ ವಿಶ್ವಕಪ್ 2026ರಲ್ಲಿ ಉತ್ತರ ಅಮೆರಿಕದಲ್ಲಿ ನಡೆಯಲಿದ್ದು, ಪ್ರಸ್ತುತ ಪಾಲ್ಗೊಳ್ಳುತ್ತಿರುವ ತಂಡಗಳ ಸಂಖ್ಯೆ 32ರಿಂದ 48ಕ್ಕೆ ಏರಿಕೆಯಾಲಿದೆ. ಮತ್ತೊಂದೆಡೆ ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯ ಮತ್ತು ನ್ಯೂಜಿಲೆಂಡ್‌ನಲ್ಲಿ ನಡೆಯಲಿದ್ದು, ಮೊದಲ ಬಾರಿಗೆ 32 ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X