ಪಂಜಾಬಿನ ಮುಲ್ಲನ್ಪುರ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 18 ರನ್ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.
ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತ್ತು. ಪಂಜಾಬ್ ಕಿಂಗ್ಸ್ ಪರ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ 103 ರನ್ ಗಳಿಸಿದರೆ, ಶಶಾಂಕ್ ಸಿಂಗ್ ಅಜೇಯ 52 ರನ್ ಗಳಿಸಿ, ಮಿಂಚಿದ್ದರು.
ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ನೀಡಿದ್ದ ಮೊತ್ತವನ್ನು ಬೆನ್ನಟ್ಟಿದ ಸಿಎಸ್ಕೆ, 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ಗಳಿಸಲಷ್ಟೇ ಶಕ್ತವಾಗಿ 18 ರನ್ಗಳಿಂದ ಸೋಲು ಕಂಡಿತು. ಆ ಮೂಲಕ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡಿದೆ.
Back to winning ways this season ✅
— IndianPremierLeague (@IPL) April 8, 2025
First home win this season ✅@PunjabKingsIPL compile a comprehensive 1⃣8⃣-run victory over #CSK ❤️
Scorecard ▶ https://t.co/HzhV1VtSRq #TATAIPL | #PBKSvCSK pic.twitter.com/HtcXw4UYAK
ಚೆನ್ನೈನಲ್ಲಿ ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಆ ಬಳಿಕ ಆಡಿರುವ ನಾಲ್ಕೂ ಪಂದ್ಯದಲ್ಲಿ ಸೋಲನುಭವಿಸಿತ್ತಾ ಬಂದಿದೆ. ಪಂಜಾಬ್ ವಿರುದ್ಧದ ಇಂದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದ ಮಹೇಂದ್ರ ಸಿಂಗ್ ಧೋನಿ ಅವರು, ಭರ್ಜರಿ ಸಿಕ್ಸರ್ಗಳ ಮೂಲಕ ಪ್ರಯತ್ನ ನಡೆಸಿದರಾದರೂ, ಕೊನೆಯ ಓವರ್ನಲ್ಲಿ ಔಟಾದ್ದರಿಂದ ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.