ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ ಮೇಯಿಸಲು ಹೋಗಿದ್ದ ರಾತ್ರಿ ಬರುವಾಗ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಈ ವೇಳೆ ಕುರಿಗಾಯಿಗೆ ಸಿಡಿಲು ಬಡಿದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು
ಮಾಹಿತಿ ತಿಳಿಯುತ್ತಿದ್ದಂತೆ ಕುರಿಗಾಯನಿಗೆ ಮಸ್ಕಿ ಆಸ್ಪತ್ರೆಗೆ ದಾಖಲಿಸಲು ಗ್ರಾಮಸ್ಥರು ಕರೆದೊಯ್ಯುವಾಗ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಗ್ರಾಮಕ್ಕೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.