ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣವಾದರೂ ಕೂಡ ಕಡಿಮೆ ಅಂಕ ಬಂದಿದೆಯೆಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.
ಕೆ ಪಿ ಮನೋಜ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪಿಯುಸಿ ಪರಿಕ್ಷೇಯಲ್ಲಿ ನಿರೀಕ್ಷಿತ ಅಂಕ ಬಾರದಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮನೋಜ್ ಪಿಯುಸಿಯಲ್ಲಿ ಪಿಸಿಎಂಬಿ ವಿಷಯ ತೆಗೆದುಕೊಂಡಿದ್ದ. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.98ರಷ್ಟು ಅಂಕ ಗಳಿಸಿದ್ದ. ನಿನ್ನೆ ಬಂದ ಫಲಿತಾಂಶದಲ್ಲಿ ಶೇ.79 ಅಂಕ ಬಂದಿದೆ. ಆದರೂ ಆ ಫಲಿತಾಂಶ ಕಡಿಮೆಯೆಂದು ಭಾವಿಸಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕೆಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
