ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಿದರು.
ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ ಬಳಿಕ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆದಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿ.ಮೀ ಮಾರ್ಗವನ್ನು ಗಂಟೆಗೆ 110 ಕಿಮೀ ವೇಗದಲ್ಲಿ ಕ್ರಮಿಸುತ್ತದೆ ಎಂದು ರೈಲ್ವೇ ಇಲಾಖೆ ಹೇಳಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಮದ್ಯ ಸಾಗಾಟಕ್ಕೆ ಬಸ್ಸಿನಲ್ಲಿ ಅನುಮತಿ ನೀಡುವಂತೆ ಆಗ್ರಹ
ಈ ರೈಲು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ ಆರು ದಿನ ಸಂಚರಿಸಲಿದೆ. ಜೂನ್ 27ರಂದು ಮಾತ್ರ ಹಲವು ಕಡೆ ನಿಲುಗಡೆ ನೀಡಲಿದೆ. ಜೂನ್ 28ರಿಂದ ಅಧಿಕೃತ ಸಂಚಾರ ಆರಂಭವಾಗಲಿದೆ. ಆಗ ನಿಗದಿತ ನಿಲ್ದಾಣಗಳಲ್ಲಿ ಮಾತ್ರ ನಿಲ್ಲುತ್ತದೆ.
ಧಾರವಾಡದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರದಲ್ಲಿ ಊಟ ಮತ್ತು ತಿಂಡಿಯೂ ಒಳಗೊಂಡಿರುತ್ತದೆ.