ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮ ಸಂದೇಶ ಬಿಡುಗಡೆ ಮಾಡಿರುವ ಅವರು, “ಈ ಹಿಂದಿನಂತೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಡಿಸಿ ಕಚೇರಿ ಮುಂಭಾಗದ ಜಾಗದ ಸಮಸ್ಯೆಯನ್ನು ಪರಿಹರಿಸಲಾಗಿದೆ. ಸಮಸ್ಯೆಗಳ ಕುರಿತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಲಾಗಿದೆ. ವಿಚಾರ ಇತ್ಯರ್ಥಕ್ಕೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಸಿಸಿ ಕ್ಯಾಮರಾಗಳ ಅಳವಡಿಕೆ, ಲೈಟ್ ಅಳವಡಿಕೆ ಹಾಗೂ ಸ್ವಚ್ಛತೆಗೆ ಬೇಡಿಕೆ ವ್ಯಕ್ತವಾಗಿದೆ. ಇದನ್ನು ಆಡಳಿತ ವ್ಯವಸ್ಥೆಯಿಂದ ಕೈಗೊಳ್ಳಲು ಸಮ್ಮತಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾಳೆ (ಏ.10) ಬೆಳಗ್ಗೆ 10 ಗಂಟೆಯಿಂದ ಈ ಹಿಂದೆ ಬಳಸಲಾಗುತ್ತಿದ್ದಂತೆ, ಜಾಗವನ್ನು ಪಾರ್ಕಿಂಗ್ ಗಾಗಿ ಬಳಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ. ಈ ನಿಟ್ಟಿನಲ್ಲಿ ಸಹಕರಿಸಿದ ಮತ್ತು ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಸಹಾಯ ಮಾಡಿದ ಸಾರ್ವಜನಿಕರು, ಸಮುದಾಯಗಳ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರಿಗೆ ಹಾಗೂ ಮಾಧ್ಯಮ ಬಳಗಕ್ಕೆ ಧನ್ಯವಾದ ಅರ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ | ಈದ್ಗಾ ಮೈದಾನಕ್ಕೆ ಸಿಸಿಟಿವಿ ಕಣ್ಗಾವಲು