ರಾಮದೇವರ ಬೆಟ್ಟದಲ್ಲಿ ರಾಮಮಂದಿರ | ಶೀಘ್ರವೇ ಶಿಲಾನ್ಯಾಸ: ಸಚಿವ ಅಶ್ವತ್ಥನಾರಾಯಣ

Date:

Advertisements
  • ಎಲ್ಲ ಇಲಾಖೆಗಳ ಒಪ್ಪಿಗೆ ಪಡೆದು ಮಂದಿರ ನಿರ್ಮಾಣ ಮಾಡುತ್ತೇವೆ
  • ನಮ್ಮ ಪಕ್ಷ ಯಾರೊಂದಿಗೂ ಹೊಂದಾಣಿಕೆ ಇಲ್ಲದೆ ಅಧಿಕಾರಕ್ಕೆ ಬರಲಿದೆ

ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಅಂದಾಜು 120 ಕೋಟಿ ರೂ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು.

ವಿಕಾಸಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಬಹಳ ಕಾಲದಿಂದ ರಾಮನಗರ ರಾಮದೇವರ ಬೆಟ್ಟದ ಅಭಿವೃದ್ಧಿ ಬಗ್ಗೆ ಚರ್ಚೆ ಆಗ್ತಿತ್ತು.

ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕ್ರಮ ವಹಿಸಿದೆ. ದಕ್ಷಿಣದ ಅಯೋಧ್ಯೆ ಎಂದು ಹೆಸರು ಪಡೆದಿರುವ ಈ ಪ್ರದೇಶವನ್ನು ಹೇಗೆಲ್ಲ ಅಭಿವೃದ್ದಿ ಮಾಡಬಹುದು ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಶೀಘ್ರವೇ ಇದರ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಹೇಳಿದರು.

Advertisements

ರಾಮನಗರ ಬೆಟ್ಟದ ಬಗ್ಗೆ ದಾಖಲೆ ಸಂಗ್ರಹಿಸಲಾಗುತ್ತಿದೆ. ದೇಗುಲ ನಿರ್ಮಾಣದ ಬಗ್ಗೆ ಮುಜರಾಯಿ ಇಲಾಖೆಯಿಂದ ನಿರ್ಮಿತಿ ಕೇಂದ್ರಕ್ಕೆ ಡಿಪಿಆರ್ ತಯಾರಿಸಿ ಕಳುಹಿಸಿ ಕೊಡಲು ತೀರ್ಮಾನ ಆಗಲಿದೆ.

ಮುಜರಾಯಿ ಇಲಾಖೆಯ ಅನುಮತಿ, ಸಿಎಂ ಅನುಮತಿ ಪಡೆದು ಆದಷ್ಟು ಬೇಗ ಕಾರ್ಯ ಪ್ರವೃತ್ತರಾಗುತ್ತೇವೆ. ಕಾನೂನು ತೊಡಕುಗಳಿಲ್ಲದೆ ಕೆಲಸ ಸಾಗುವಂತೆ ನೋಡಿಕೊಳ್ಳುತ್ತೇವೆ.

ಎಲ್ಲ ನಿರ್ಬಂಧಗಳನ್ನ ಗಮನದಲ್ಲಿಟ್ಟುಕೊಂಡು, ಎಲ್ಲ ಇಲಾಖೆಗಳಿಂದ ಅನುಮತಿ ಪಡೆದುಕೊಂಡು ಕೆಲಸ ಮಾಡುತ್ತೇವೆ ಎಂದು ಅಶ್ವತ್ಥನಾರಾಯಣ ಹೇಳಿದರು.

ರಾಮಮಂದಿರ ಕಟ್ಟೋದು ರಾಮನ ಸೇವೆಯ ಹಾಗೆ ಇದಕ್ಕೆ ಸಮಯದ ಗಡುವು ಇಲ್ಲ, ಆದಷ್ಟು ಬೇಗ ಮಂದಿರ ನಿರ್ಮಾಣದ ಕೆಲಸ ಆರಂಭಿಸುತ್ತೇವೆ ಎಂದು ಸಚಿವರು ಹೇಳಿದರು.

ಬಿಜೆಪಿ – ಜೆಡಿಎಸ್ ಹೊಂದಾಣಿ
ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಕುರಿತಂತೆ ಶಾಸಕ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ, ನಮಗೆ ಜೆಡಿಎಸ್ ಕಾಂಗ್ರೆಸ್ ಎದುರಾಳಿಗಳು.

ಈ ಬಾರಿ ಸಂಪೂರ್ಣವಾಗಿ ಬಹುಮತ ಪಡೆದುಕೊಂಡೇ ನಾವು ಆಡಳಿತಕ್ಕೆ ಬರುತ್ತೇವೆ. ಯಾವ ಪಕ್ಷಗಳೊಂದಿಗೂ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? :ಸೋಲು ಖಚಿತ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಬದಾಮಿ ಕ್ಷೇತ್ರ…

ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ, ಭ್ರಷ್ಟಾಚಾರ ಮಾಡಲು ಇರುವ ಪಾರ್ಟಿ ಕಾಂಗ್ರೆಸ್. ಭ್ರಷ್ಟಾಚಾರದ ಬಗ್ಗೆ ಮಾತಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ.

ಭ್ರಷ್ಟಾಚಾರ ಮಾಡಿದ ಯಾರನ್ನೂ ಕೂಡ ಸಹಿಸಲು ಸಾಧ್ಯ ಇಲ್ಲ. ಅದು ನಮ್ಮವರೇ ಆಗಲಿ ಯಾರೇ ಆಗಿರಲಿ.

ಭ್ರಷ್ಟಾಚಾರದಲ್ಲಿ ಯಾರೇ ಇದ್ದರೂ ಅವರನ್ನು ಕ್ಷಮಿಸುವೇ ಮಾತೇ ಇಲ್ಲ. ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣವಾಗಿ ಕ್ರಮ ಆಗಬೇಕು ಎಂದು ಅವರು ಹೇಳಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X