ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್ನ ಸಂಪೂರ್ಣ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ.
ಅಕ್ಟೋಬರ್ 5ರಂದು ಚಾಲನೆಗೊಳ್ಳಲಿರುವ ಟೂರ್ನಿಯು ನವೆಂಬರ್ 19ರವರೆಗೆ ನಡೆಯಲಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ತಂಡ ಮೊದಲ ಪಂದ್ಯವನ್ನು ಆಡಲಿದೆ.
ಭಾರತವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.
ಬಹು ನಿರೀಕ್ಷಿತ ಹೈ ವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯವು ಅಕ್ಟೋಬರ್ 15ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

Proud moment for India! Hosting the ICC Men's Cricket World Cup for the fourth time is an incredible honor. With 12 cities as the backdrop, we'll showcase our rich diversity and world-class cricketing infrastructure. Get ready for an unforgettable tournament! #CWC2023 @ICC @BCCI pic.twitter.com/76VFuuvpcK
— Jay Shah (@JayShah) June 27, 2023