ಕೇಂದ್ರ ಬಿಜೆಪಿ ಸರ್ಕಾರವು ಗೃಹಬಳಕೆ ಎಲ್‌ಪಿಜಿ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ಮೇಲೆ ಖಾಲಿ ಸಿಲಿಂಡರ್ ಇಟ್ಟು ಒಲೆ ಮೇಲೆ ಅಡುಗೆ ಬೇಯಿಸುವುದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ ಮಾಡಿದರು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು, ಪದಾಧಿಕಾರಿಗಳು, ಮಹಿಳೆಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು