ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ; ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ: ಸಿದ್ದರಾಮಯ್ಯ

Date:

Advertisements

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ, “ಸುಪ್ರೀಂಕೋರ್ಟ್‌ನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯವರೆಗಿನ ಗೊಂದಲಗಳು ನಿವಾರಣೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯಪಾಲರು ಮಸೂದೆಗಳನ್ನು ಕಾಯ್ದಿರಿಸುವ ಬಗ್ಗೆ ಸುಪ್ರೀಂ ತೀರ್ಪು; ಎಲ್ಲಾ ರಾಜ್ಯಗಳಿಗೂ ಸಿಕ್ಕ ಜಯವೆಂದ ಸ್ಟಾಲಿನ್

Advertisements

“ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ಗೌರವಾನ್ವಿತ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಅಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂದು ನಂಬಿದ್ದೇನೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ

ಶಾಸಕಾಂಗ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಗೀಕರಿಸದೆ, ಅದರ ತಿದ್ದುಪಡಿಗೂ ಸೂಚಿಸದೆ ದೀರ್ಘಕಾಲ ಹಾಗೆಯೇ ಬಿಡುವುದು ತಪ್ಪು ಮತ್ತು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ.

ರಾಜ್ಯಪಾಲ ಆರ್ ಎನ್ ರವಿ ಅವರು ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ, ನಿರಾಕರಿಸುವುದರ ವಿರುದ್ಧ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.

ಒಮ್ಮೆ ಮಸೂದೆಯಲ್ಲಿ ಸೂಚಿಸಿದ ತಿದ್ದುಪಡಿಯನ್ನು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ ಬಳಿಕ ಒಪ್ಪಿಗೆಯನ್ನು ತಡೆಹಿಡಿಯುವುದು ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X