ಯಾದಗಿರಿ | ವಿದ್ಯುತ್‌ ಅವಘಡ : ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Date:

Advertisements

ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ ವಿಪರೀತ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಗ್ರಾಮದ ಹಲವು ಮನೆಗಳಲ್ಲಿ ಬೆಂಕಿ ಹತ್ತಿಕೊಂಡು ರೆಫ್ರಿಜೇಟರ್‌, ಟಿವಿ, ಫ್ಯಾನ್‌, ಮನೆಯ ತಂತಿಗಳು ಸುಟ್ಟು ಹೋಗಿದ್ದವು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಭೇಟಿ ನೀಡಿ ಅವಘಡ ಸಂಭವಿಸಿದ ಮನೆಗಳಿಗೆ ಭೇಟಿ ನೀಡಿದರು. ಭಯ ಪಡುವುದು ಬೇಡ, ನಿಮ್ಮೊಂದಿಗೆ ನಾವಿದ್ದೇವೆʼ ಎಂದು ಧೈರ್ಯ ತುಂಬಿದರು.

Advertisements
WhatsApp Image 2025 04 09 at 9.58.06 PM
ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜೆಸ್ಕಾಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಹಾನಿಯಾದ ಬಗ್ಗೆ ವರದಿ ನೀಡಬೇಕು. ಆ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಪ್ರಯತ್ನಿಸುತ್ತೇನೆʼ ಎಂದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್‌, ತಹಶೀಲ್ದಾರ್ ಹೆಚ್.ಎ.ಸರಕಾವಸ್, ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್‌, ಪಿಐ ಆನಂದ ವಾಘಮೋಡೆ, ಜೆಸ್ಕಾಂ ಎಇಇ ರಫಿಕ್‌, ಕಂದಾಯ ನಿರೀಕ್ಷಕ ಬಸವರಾಜ ಬಿರಾದರ್ ಸೇರಿದಂತೆ ರಾಜಾ ಸಂತೋಷ ನಾಯಕ,‌ ರಮೇಶ ದೊರೆ ಅಲ್ದಾಳ, ದತ್ತು ನಾಯಕ, ದೇವು ನಾಯಕ, ಮಹೇಶ, ದೇವು ಕುಂಬಾರ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X