“ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ. ಮಹಾವೀರರ ವಿಚಾರಧಾರೆಗಳು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಸರ್ವೋದಯದ ಧರ್ಮತೀರ್ಥದಂತಿತ್ತು” ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹೇಳಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭಾವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಗುರುವಾರ ಆಯೋಜಿಸಿದ್ದ ಭಗವಾನ್ ಶ್ರೀ ಮಹಾವೀರರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
“ಮಹಾವೀರ್ ಮಹಾರಾಜರು, ‘ಪ್ರಾಣಿ ಒದೆ, ಪ್ರಾಣಿ ಹಿಂಸೆ ಮಾಡಬಾರದು. ನಾವು ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಯಾರನ್ನು ಹಿಂಸಿಸಬಾರದು’ ಎಂದು ಹೇಳಿದರು. ಪ್ರಾಣಿ ಹಿಂಸೆ ಮಹಾಪಾಪವೆಂದು, ಅಹಿಂಸಾ ಪರಮೋ ಧರ್ಮ ಎಂದು ಸಾರಿದರು” ಎಂದು ಹೇಳಿದರು.
“ಅತ್ಯಂತ ಸೂಕ್ಷ್ಮ ಪ್ರಾಣಿ ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಪ್ರಾಣಿ ಹಿಂಸೆ ಮಹಾ ಪಾಪವೆಂದು ಬದುಕು ಮತ್ತು ಬದುಕಲಿಕ್ಕೆ ಬಿಡು ಎಂಬ ಮಾತು ಎಲ್ಲ ಕಾಲಕ್ಕೂ ಸಲ್ಲುತ್ತದೆ. ಶಾಂತಿ, ಸಹನೆ, ತಾಳ್ಮೆ ಜೀವನದ ಮಂತ್ರಗಳಾಗಬೇಕು. ಆ ಮೂಲಕ ಪರೋಪಕಾರ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಭಗವಾನ್ ಮಹಾವೀರರು ನೀಡಿದ್ದಾರೆ. ಎಲ್ಲರೂ ಅವರ ಬದುಕಿನ ಆದರ್ಶಗಳನ್ನು ಪಾಲಿಸೋಣ” ಎಂದು ಸಿ ಎನ್ ಶ್ರೀಧರ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ : ಶಾಸಕ ಶ್ರೀನಿವಾಸ ಮಾನೆ
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಸೇರಿದಂತೆ ಗಣ್ಯರು ಸಮಾಜದ ಮುಖಂಡರು ಹಾಜರಿದ್ದರು.
