ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ
  • ಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳ ಜಾರಿ ನಿಶ್ಚಿತ

ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್‌ ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್ಐ ನೇಮಕಾತಿ ಹಾಗೂ ಬಿಟ್ ಕಾಯಿನ್ ಹಗರಣಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ಹಾಸನ ನಗರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆ ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅಲ್ಲಿ ಇಬ್ಬರು ಮಾತ್ರವೇ ಮೃತಪಟ್ಟಿದ್ದಾರೆ ಎಂದಿದ್ದರು. ಆದರೆ, ಅಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಿತ್ತು” ಎಂದರು.

“ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ” ಎಂದು ಹೇಳಿದರು.

Advertisements

ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ

“ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ” ಎಂದು ಆರೋಪಿಸಿದರು.

ಕೆಂಪೇಗೌಡ ಜಯಂತಿ 02

“ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಿಜೆಪಿ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ?” ಎಂದು ಪ್ರಶ್ನಿಸಿದರು.

“ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿ.ಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುವಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ

ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ರಾಜಕೀಯ ಗಿಮಿಕ್ ಮಾಡಲು ಹೊರಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ” ಎಂದು ಹೇಳಿದರು.

ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ

2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಾಗುವುದು. ಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

ಕೆಂಪೇಗೌಡರು ಜನಪರ, ಜಾತ್ಯತೀತ ದೊರೆ

ಕೆಂಪೇಗೌಡರು ಜನಪರ ಹಾಗೂ ಜಾತ್ಯತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.

ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡುವ ಬಗ್ಗೆ ನಿರ್ಧಾರ

ಹಾಸನ ದೇಶಕ್ಕೆ ಪ್ರಧಾನಮಂತ್ರಿಯನ್ನು ಕೊಟ್ಟಿರುವ ಜಿಲ್ಲೆ. ಹಾಸನ ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡುವ ಬೇಡಿಕೆ ಇದೆ. ಖಂಡಿತಾ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್​ ರಾಜಣ್ಣ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X