ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿ ಕನ್ನಡ ಪಕ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
“ಒಂದನೇ ತರಗತಿಗೆ ಮಕ್ಕಳು ಪ್ರವೇಶ ಪಡೆಯುವ ವಯಸ್ಸಿನ ವಿಚಾರವು ರಾಜ್ಯದಲ್ಲಿ ಪೋಷಕರ ಕಳವಳಕ್ಕೆ ಕಾರಣವಾಗಿದೆ. ಮಕ್ಕಳು ಕನಿಷ್ಠ ವರ್ಷ ಪೂರೈಸಿರಬೇಕು ಎನ್ನುವ ರಾಜ್ಯ ಸರ್ಕಾರದ 202ರ ಆದೇಶವನ್ನು ಶಾಲೆಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಾಲಿಸಲು ಮುಂದಾಗಿವೆ. ಇದರಿಂದ ರಾಜ್ಯದ ಲಕ್ಷಾಂತರ ಮಕ್ಕಳು ಯುಕಜಿಯನ್ನು ಮತ್ತೆ ಒಂದು ವರ್ಷ ಪುನರಾವರ್ತಿಸಬೇಕಾಗಿ ಬಂದಿದೆ” ಎಂದು ಹೇಳಿದರು.
“ಪೋಷಕರಿಗೆ ಉಂಟಾಗುವ ಆರ್ಥಿಕ ಹೊರೆ ಮತ್ತು ಮಕ್ಕಳ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಇತರೆ ಕೆಲ ರಾಜ್ಯಗಳಂತೆ, ಈ ಬಾರಿ ಶಾಲಾ ಪ್ರವೇಶದ ವಯೋಮಿತಿಯಲ್ಲಿ ಸಡಿಲಿಕೆ ಮಾಡುವಂತೆ ಪೋಷಕರು ಸರ್ಕಾರವನ್ನು ಮನವಿ ಮಾಡುತ್ತಿದ್ದಾರೆ” ಎಂದರು.
“ಪ್ರತಿ ವರ್ಷವೂ ಇಂಥದೇ ಸ್ಥಿತಿ ಉದ್ಭವಿಸುವುದರಿಂದ ನಿಯಮದ ಪ್ರಕಾರ, 2025 ಜೂನ್ 1ಕ್ಕೆ 6 ವರ್ಷ ತುಂಬಿರುವ ಮಕ್ಕಳಿಗೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡುವುದಾಗಿ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹೇಳುತ್ತಿವೆ. ಇದರಿಂದ ರಾಜ್ಯದಲ್ಲಿ 6 ವರ್ಷ ತುಂಬದ ಯುಕಜಿಯ ಮಕ್ಕಳು ಮತ್ತೆ ಒಂದು ವರ್ಷ ಯುಕೆಜಿಯಲ್ಲೇ ಉಳಿಯಬೇಕಾಗಿದೆ. ರಾಜ್ಯದಲ್ಲಿ ಇಂತಹ ಸುಮಾರು ಐದು ಲಕ್ಷ ಮಕ್ಕಳಿದ್ದು, ಅವರ ಶೈಕ್ಷಣಿಕ ಜೀವನ ಸಂದಿಗ್ಧಕ್ಕೆ ಸಿಲುಕಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
“ಬಹುತೇಕ ಶಾಲೆಗಳು ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಿಕೊಳ್ಳುವಾಗ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ದಿಢೀರ್ ನಿಯಮ ಮುಂದಿಡುತ್ತಿವೆ ಎನ್ನುವುದು ಪೋಷಕರ ಆರೋಪವಾಗಿದೆ. ಇಂಥ ಮಕ್ಕಳ ಪಟ್ಟಿಯಲ್ಲಿ ಒಂದೆರಡು ದಿನದ ವ್ಯತ್ಯಾಸ ಇರುವವರು, ವಾರಗಳ, ತಿಂಗಳ ವ್ಯತ್ಯಾಸ ಇರುವವರೂ ಇದ್ದಾರೆ. ಆದ್ದರಿಂದ ಈ ಕೂಡಲೇ ಹಿಂದಿನ ವರ್ಷದಂತೆ ಮಕ್ಕಳನ್ನು ಶಾಲೆಗೆ ಸೆರಿಸಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು” ಎಂದು ಕನ್ನಡ ಪಕ್ಷ ಎಚ್ಚರಿಕೆ ನೀಡಿದೆ.