ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ

Date:

Advertisements

ವಕ್ಫ್ ತಿದ್ದುಪಡಿ ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈಗಾಗಲೇ ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ ಸಲ್ಲಿಸಿದ ಅರ್ಜಿ ಸೇರಿದಂತೆ ಇತರ 10 ಅರ್ಜಿಗಳನ್ನು ಏಪ್ರಿಲ್ 16ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ʼವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಹಲವಾರು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ಕಾನೂನು ರಚನೆ ಪ್ರಕ್ರಿಯೆಯಲ್ಲಿ ಸಂಸದೀಯ ಪದ್ಧತಿಗಳ ಉಲ್ಲಂಘನೆ ಮಾಡಲಾಗಿದೆ. ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತ ಜಂಟಿ ಸಂಸದೀಯ ಸಮಿತಿಯ ಕರಡು ವರದಿಯ ಪರಿಗಣನೆ, ಅಂಗೀಕಾರ ಮತ್ತು ಸಂಸತ್ತಿನಲ್ಲಿ ಮಂಡಿಸುವ ವೇಳೆ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿದ್ದಾರೆʼ ಎಂದು ಮಹುವಾ ಮೊಯಿತ್ರಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆನ್​​ಲೈನ್​​ ಗೇಮಿಂಗ್-ಬೆಟ್ಟಿಂಗ್‌ಗೆ ಕಡಿವಾಣ ಹಾಕಿ, ಕಾಯ್ದೆ ರೂಪಿಸುವ ಅಗತ್ಯವಿದೆ

ಈ ಮೊದಲು ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ, ಎಎಪಿ ನಾಯಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಅರ್ಷದ್ ಮದನಿ, ಸಮಸ್ತ ಕೇರಳ ಜಮೀಯತುಲ್ ಉಲೇಮಾ, ಅಂಜುಮ್ ಖಾದ್ರಿ, ತೈಯಬ್ ಖಾನ್ ಸಲ್ಮಾನಿ, ಮುಹಮ್ಮದ್ ಶಫಿ, ಮುಹಮ್ಮದ್ ಫಝಲುರಹೀಂ, ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಝಾ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಜಮಿಯತ್ ಉಲಮಾ-ಇ-ಹಿಂದ್, ಡಿಎಂಕೆ, ಕಾಂಗ್ರೆಸ್ ಸಂಸದ ಮುಹಮ್ಮದ್ ಜಾವೇದ್ ಅವರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X