ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ

Date:

Advertisements
  • ಸಚಿವರನ್ನು ಭೇಟಿ ಮಾಡಿದ ಬೌದ್ಧ ಭಿಕ್ಕುಗಳ ನಿಯೋಗ
  • ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ಮನವಿ

ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಮಂಗಳವಾರ ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿದ ಸಚಿವರು, “ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಮೈಸೂರಿನ ಮೂಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಚೋದ್ದಿ ತಾಶಿ ಲುಮ್ಪೋ’ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು.

Advertisements

500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು, ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು.

“ಆಸ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನ ಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು” ಎಂದು ಸಚಿವರು ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಎಸ್ಐಟಿ ತನಿಖೆ: ಸಚಿವ ಕೃಷ್ಣಭೈರೇಗೌಡ

ದಕ್ಷಿಣ ಭಾರತದ ಸೆಂಟ್ರಲ್ ಟಿಬೇಟಿಯನ್ ಅಡ್ಮಿನ್ಸ್ಟ್ರೇಷನ್ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.
ಇದೇ ಸಂದರ್ಭದಲ್ಲಿ ನಿಯೋಗ ಸಚಿವರಿಗೆ ಟಿಬೇಟಿಯನ್ ಸಾಂಪ್ರದಾಯಿಕ ಗೌರವ ನೀಡಿ ಸನ್ಮಾನಿಸಿತು. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಮಹಾಬೋಧಿ ಸೊಸೈಟಿಗೆ ಭೇಟಿ ನೀಡುವಂತೆ ಸಚಿವರಿಗೆ ಆಹ್ವಾನ ನೀಡಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X