ನಿತೀಶ್ ಕುಮಾರ್‌ ಉಪ ಪ್ರಧಾನಿಯಾಗಲಿ: ಬಿಜೆಪಿ ಹಿರಿಯ ನಾಯಕ ಅಶ್ವಿನಿ ಚೌಬೆ ಒತ್ತಾಯ

Date:

Advertisements

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉಪ ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ. ಹಾಗೆಯೇ ಇದು ತನ್ನ ‘ವೈಯಕ್ತಿಕ’ ಅಭಿಪ್ರಾಯವೆಂದು ಚೌಬೆ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಬೆ, “ದಿವಂಗತ ಜಗಜೀವನ್ ರಾಮ್ ನಂತರ ಬಿಹಾರದ ಜೆಡಿಯು ಮುಖ್ಯಸ್ಥರನ್ನು ಎರಡನೇ ಉಪ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ. ಎನ್‌ಡಿಎಗೆ ನಿತೀಶ್ ಕುಮಾರ್ ಅವರ ಕೊಡುಗೆ ಅದ್ಭುತವಾಗಿದೆ. ಅವರು ಒಕ್ಕೂಟದ ಆಧಾರಸ್ತಂಭದ ಪಾತ್ರ ವಹಿಸಿದ್ದಾರೆ. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

Advertisements

“ಎನ್‌ಡಿಎಗೆ ಇಷ್ಟೊಂದು ಸಹಾಯ ಮಾಡಿದ ನಿತೀಶ್ ಕುಮಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಿಸಬೇಕು ಎಂಬುದು ನನ್ನ ವೈಯಕ್ತಿಕ ಆಸೆ. ನನ್ನ ಬಯಕೆ ಈಡೇರಿದರೆ, ಬಾಬು ಜಗಜೀವನ್ ರಾಮ್ ನಂತರ ಬಿಹಾರದ ಎರಡನೇ ಪುತ್ರ ಅಧಿಕಾರಕ್ಕೆ ಏರುವುದನ್ನು ನೋಡಬಹುದು” ಎಂದರು.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸತತ ಐದನೇ ಬಾರಿಗೆ ಸ್ಪರ್ಧಿಸಲು ಬಯಸುತ್ತಿರುವ 74 ವರ್ಷದ ನಿತೀಶ್ ಕುಮಾರ್ ಅವರನ್ನು ಗೌರವಾನ್ವಿತವಾಗಿಯೇ ಬಿಜೆಪಿ ಬದಿಗೆ ತಳ್ಳಬಹುದು. ನಿತೀಶ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರಲಾರದು ಎಂಬ ಊಹಾಪೋಹಗಳಿವೆ. ಈ ನಡುವೆ ಬಿಜೆಪಿ ಹಿರಿಯ ನಾಯಕರ ಹೇಳಿಕೆ ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X