ಬಿಹಾರ ಸಿಎಂ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ; ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಪೊಲೀಸ್ ವಶಕ್ಕೆ

Date:

Advertisements

ಕಾಂಗ್ರೆಸ್ ನಾಯಕ ಮತ್ತು ಎನ್‌ಎಸ್‌ಯುಐ (ಭಾರತೀಯ ವಿದ್ಯಾರ್ಥಿ ಒಕ್ಕೂಟ) ಉಸ್ತುವಾರಿ ಕನ್ಹಯ್ಯ ಕುಮಾರ್ ಅವರನ್ನು ಶುಕ್ರವಾರ ಪಾಟ್ನಾದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭನ್ ಮತ್ತು ಅವರ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂಗೆ ಮನವಿ ಪತ್ರ ಸಲ್ಲಿಸಲು ತೆರಳುತ್ತಿದ್ದಾಗ ಬಂಧಿಸಲಾಗಿದೆ.

ಕಾಂಗ್ರೆಸ್ ನಿಯೋಗ ನಿತೀಶ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ಜಲಫಿರಂಗಿ ಬಳಸಿದ್ದಾರೆ. ನಿತೀಶ್ ಆಡಳಿತವು ಯುವಕರಿಗೆ ಉದ್ಯೋಗ ನೀಡುವಲ್ಲಿ ಅಸಮರ್ಥವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

Advertisements

ಸಿಎಂ ನಿವಾಸದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಜಲಫಿರಂಗಿಗಳನ್ನೂ ಬಳಸಿದ್ದಾರೆ. ನಂತರ ಕನ್ಹಯ್ಯ ಮತ್ತು ಇತರ 30 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಕನ್ಹಯ್ಯ ಅವರನ್ನು ಬಿಡುಗಡೆ ಮಾಡಲಾಗಿದೆ.

“ನಮಗೆ ಲಾಠಿ ಅಥವಾ ನೀರಿನ ಫಿರಂಗಿ ಬೇಡ. ನಮ್ಮ ನಲ್ಲಿಗಳಿಗೆ ನೀರು ಬರಬೇಕು, ಅಷ್ಟೇ ನಮಗೆ ಬೇಕು. ನಮ್ಮ ಮೇಲೆ ನೀರು ಸಿಂಪಡಿಸುವುದು ಬೇಡ, ಬದಲಾಗಿ ‘ನಲ ಜಲ ಯೋಜನೆ’ (ಕುಡಿಯುವ ನೀರಿನ ಯೋಜನೆ) ಅಡಿಯಲ್ಲಿ ನೀರು ಸರಿಯಾಗಿ ನೀಡಿ. ಸರ್ಕಾರ ನಲ್ಲಿಗಳಲ್ಲಿ ನೀರು ಒದಗಿಸದೆ ಅದನ್ನು ವಿದ್ಯಾರ್ಥಿಗಳು ಮತ್ತು ಯುವಕರ ಮೇಲೆ ಜಲಫಿರಂಗಿ ಪ್ರಯೋಗಿಸಲು ಬಳಸುತ್ತಿದೆ” ಎಂದು ಬಂಧನಕ್ಕೊಳಗಾಗುವಾಗ ಕನ್ಹಯ್ಯ ಹೇಳಿದರು.

ಮಾರ್ಚ್ 16 ರಂದು ಚಂಪಾರಣ್‌ನ ಭಿತಿಹರ್ವ ಆಶ್ರಮದಲ್ಲಿ ‘ಪಳಯನ್ ರೋಕೋ, ನೌಕ್ರಿ ದೋ’ (ವಲಸೆ ನಿಲ್ಲಿಸಿ, ಉದ್ಯೋಗ ನೀಡಿ) ಪಾದಯಾತ್ರೆಯನ್ನು ಪ್ರಾರಂಭಿಸಿದ ಜೆಎನ್‌ಯುಎಸ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ)ದ ಮಾಜಿ ಅಧ್ಯಕ್ಷ ಕನ್ಹಯ್ಯ, ಇಂದು ಅನೇಕ ಜಿಲ್ಲೆಗಳು ಮತ್ತು ನೂರಾರು ಕಿಲೋಮೀಟರ್‌ಗಳನ್ನು ಕ್ರಮಿಸಿ ತಮ್ಮ ಮೆರವಣಿಗೆಯನ್ನು ಕೊನೆಗೊಳಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಏಪ್ರಿಲ್ 7ರಂದು ಕನ್ಹಯ್ಯ ಅವರೊಂದಿಗೆ ಸೇರಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X