ಮೈಸೂರು | ಗಾಜಾ ಉಳಿಯಲಿ; ಇಸ್ರೇಲ್ ದಾಳಿ ನಿಲ್ಲಲಿ

Date:

Advertisements

ಎಐಯುಟಿಯುಸಿ ಜಿಲ್ಲಾ ಸಮಿತಿಯಿಂದ ಮೈಸೂರು ನಗರದ ಗಾಂಧಿ ವೃತ್ತದಲ್ಲಿ ಗಾಜಾ ಉಳಿಯಲಿ, ಇಸ್ರೇಲ್ ದಾಳಿ ನಿಲ್ಲಲಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಸಾಮ್ರಾಜ್ಯ ಶಾಹಿ ಅಮೇರಿಕದ ನೆರವಿನೊಂದಿಗೆ ಜಿಯೋನಿಸ್ಟ್ ಇಸ್ರೇಲ್, ಗಾಜಾದ ಅಸ್ತಿತ್ವವನ್ನೇ ನಾಶ ಮಾಡುವಂತಹ ಭೀಕರವಾದ ಶಸ್ತ್ರಾಸ್ತ್ರ ದಾಳಿಯನ್ನು ನಡೆಸುತ್ತಿದೆ. ಕದನ ವಿರಾಮವನ್ನು ಕೂಡಾ ಲೆಕ್ಕಿಸದೇ ನಿರಾಶ್ರಿತ ಶಿಬಿರಗಳು, ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳನ್ನು, ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಈ ಭೀಕರ ದಾಳಿಯಿಂದಾಗಿ ಸಾವಿರಾರು ಮಂದಿ ಪ್ಯಾಲೇಸ್ತೀನಿ ಮುಗ್ಧ ಮಕ್ಕಳು, ನಾಗರಿಕರು, ಬಡವರು, ಶ್ರಮಿಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.

ಇಸ್ರೇಲಿನ ಈ ಪಾಶವೀ ದಾಳಿಗೆ, ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ತನ್ನ ಹಿಡಿತವನ್ನು ಸಾಧಿಸಲು ಸರ್ವಪ್ರಯತ್ನಗಳನ್ನು ಮಾಡುತ್ತಿರುವ ಅಮೇರಿಕ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದ ಪೂರೈಕೆಯ ಮೂಲಕ ಸಹಾಯ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಇದು ಕೇವಲ ಇಸ್ರೇಲ್- ಪ್ಯಾಲೇಸ್ಥಾನ್ ನಡುವಿನ ಯುದ್ಧಕ್ಕೆ ಮಾತ್ರವಲ್ಲದೇ ಇಡೀ ಜಗತ್ತಿನಲ್ಲಿ ನಡೆಯುತ್ತಿರುವ ಬಹುತೇಕ ಎಲ್ಲಾ ಯುದ್ಧಗಳು ಸಹ ಬಂಡವಾಳಶಾಹಿ ವ್ಯವಸ್ಥೆಯ ಮಾರುಕಟ್ಟೆಯನ್ನು ಉಳಿಸುವ, ವಿಸ್ತರಿಸುವ ಪ್ರಯತ್ನಗಳ ಭಾಗವಾಗಿವೆ.

Advertisements

ಆದರೆ ಅಂತಿಮವಾಗಿ ನೋವನ್ನು ಅನುಭವಿಸುವವರು ಆಯಾಯ ದೇಶಗಳ ಬಡಪಾಯಿ ನಾಗರೀಕರು. ಈ‌ ಹಿನ್ನೆಲೆಯಲ್ಲಿ ವಿಶ್ವದ ಶಾಂತಿಯನ್ನು ಕಾಪಾಡುವ ಸಲುವಾಗಿ, ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಈ ಕೂಡಲೇ ನಿಲ್ಲಿಸಬೇಕು ಹಾಗೂ ಗಾಜಾದಲ್ಲಿ ಶಾಂತಿ ಸ್ಥಾಪಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಜಿಲ್ಲಾಡಳಿತದಿಂದ ಮಹಾವೀರ ಜಯಂತ್ಯುತ್ಸವ

ಎಐಯುಟಿಯುಸಿ ರಾಜ್ಯ ನಾಯಕಿ ಕಾ. ಎಂ. ಉಮಾದೇವಿ ಹಾಗೂ ಎಐಯುಟಿಯುಸಿ ಮೈಸೂರು ಜಿಲ್ಲಾ ಕಾರ್ಯದರ್ಶಿಗಳಾದ ಕಾ. ಚಂದ್ರಶೇಖರ್ ಮೇಟಿ, ಜಿಲ್ಲಾಧ್ಯಕ್ಷ ಕಾ.ಯಶೋಧರ್, ಜಿಲ್ಲಾ ಸಮಿತಿ ಸದಸ್ಯರಾದ ಕಾ. ಸಂಧ್ಯಾ, ಮುದ್ದು ಕೃಷ್ಣ, ಹರೀಶ್ಸೇ ರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X