ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚನ್ನಗಿರಿ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ವ್ಯಕ್ತಪಡಿಸಿದ ಅವರು ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಸಾಮಾನ್ಯ ಜನರ ಜೀವನ ಸುಧಾರಿಸುವ ಕ್ರಮ ಕೈಗೊಳ್ಳುವ ಬದಲು ಅವರನ್ನು ಬಡತನಕ್ಕೆ ನೂಕುವ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಮಂತರ ಪರ ನಿಲುವು ಗಳನ್ನು ತೆಗೆದು ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಪ್ರಶಸ್ತಿಗೆ ಒಂದೇ ಜಾತಿಗೆ ಪ್ರಾಶಸ್ತ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರ ರಾಜಿನಾಮೆಗೆ ಆಗ್ರಹ.
ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಡ್ನಾಳ್ ಜಗಣ್ಣ, ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಹೆಚ್ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿ ನಾಗರಾಜ್, ಪುರಸಭಾ ಸದಸ್ಯರಾದ ಸೈಯದ್ ತನ್ವೀರ್, ಗೌಸ್ ಪೀರ್, ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಅನೀಸ್ ಅಲಿಖಾನ್, ಉಪಾಧ್ಯಕ್ಷ ಮಧು ಸಿ ಈರಗನಹಳ್ಳಿ, ಸುಲ್ತಾನ್ ಅಹಮದ್, ಕಾರ್ಯದರ್ಶಿ ಮುರ್ಸಲಿನ್, ಚನ್ನಗಿರಿ ಬ್ಲಾಕ್ ಯುವ ಕಾಂಗ್ರೇಸ್ ಅಧ್ಯಕ್ಷ ವಾಸಿಂ ಅಹಮದ್, ಉಪಾಧ್ಯಕ್ಷ ಮಂಜುನಾಥ ಬೀಡಗೊಂಡನಹಳ್ಳಿ, ಸಂತೇಬೆನ್ನೂರು ಬ್ಲಾಕ್ ಯುವ ಕಾಂಗ್ರೇಸ್ ಉಪಾಧ್ಯಕ್ಷ ಬಾಲಚಂದ್ರ ಹಾಗೂ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಲುಕ್ಮಾನ್ ಹಾಗೂ ಯುವ ಕಾಂಗ್ರೇಸ್ ಸದಸ್ಯರು ಭಾಗವಹಿಸಿದ್ದರು.