ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಯಚೂರು, ಯಾದಗಿರಿ, ಗುಲ್ಬರ್ಗ, ಬೀದರ್ ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
