ಮಂಡ್ಯ | 21 ವರ್ಷಗಳ ಬಳಿಕ ಪಿಯುಸಿ ಪಾಸ್‌ ಮಾಡಿದ ಅಂಗನವಾಡಿ ಶಿಕ್ಷಕಿ

Date:

Advertisements

21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್‌ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ ಬರೆಯಲು ಪ್ರೇರಣೆಯಾಗಿದ್ದಾರೆ. ಮಾತ್ರವಲ್ಲದೆ, ತಾವು ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿ ಮಾಡಲು ಮುಂದಾಗಿದೆ.

ಮಂಡ್ಯ ಜಿಲ್ಲೆಯ ಡಣಾಯಕನಪುರ ಗ್ರಾಮದ ಅಂಗನವಾಡಿ ಶಿಕ್ಷಕಿ ಡಿ ಉಷಾ ಅವರು ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಅವರು 2004ರಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಅವರಿಗೆ ಪೋಷಕರು ವಿವಾಹ ನಿಶ್ಚಯ ಮಾಡಿ, ಪಿಯುಸಿ ಪರೀಕ್ಷೆಗೆ ಒಂದು ತಿಂಗಳಿರುವಾಗಲೇ ಅವರನ್ನು ಕಾಲೇಜು ಬಿಡಿಸಿದ್ದರು. ಮದುವೆ ಮಾಡಿದ್ದರು. ಹೀಗಾಗಿ, ಅವರು ಪಿಯುಸಿ ಪರೀಕ್ಷೆ ಬರೆಯಲು ಆಗಿರಲಿಲ್ಲ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ, 2007ರಲ್ಲಿ ಅವರು ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇರಿದರು. ನಾಲ್ಕು ವರ್ಷಗಳ ಹಿಂದೆ ಅಜೀಂ ಪ್ರೇಮ್‌ಜೀ ಫೌಂಡೇಷನ್ ನೀಡಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಕಾರ್ಯಗಾರದಲ್ಲಿ ನೀಡಲಾದ ತರಬೇತಿಯಿಂದ ಪ್ರೇರಣೆಗೊಂಡ ಉಷಾ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನಿರ್ಧರಿಸಿದ್ದರು.

Advertisements

ಈ ವರ್ಷ ಪರೀಕ್ಷೆ ಕಟ್ಟಿದ್ದ ಪರೀಕ್ಷೆ ಬರೆದು, ಒಟ್ಟು 600 ಅಂಕಗಳಲ್ಲಿ 341 ಅಂಕಗಳನ್ನು ಗಳಿಸಿದ್ದಾರೆ. ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಅವರು ಕನ್ನಡ – 83, ಇಂಗ್ಲಿಷ್‌ – 43, ಇತಿಹಾಸ – 72, ಅರ್ಥಶಾಸ್ತ್ರ – 43, ಸಮಾಜಶಾಸ್ತ್ರ – 50 ಹಾಗೂ ರಾಜಶಾಸ್ತ್ರದಲ್ಲಿ 50 ಅಂಕಗಳನ್ನು ಪಡೆದಿದ್ದಾರೆ.

ತಮ್ಮ ಶಿಕ್ಷಣವನ್ನು ಮುಂದುವರೆಸಿರುವುದು ಮಾತ್ರವಲ್ಲದೆ, ಅವರು ಅಂಗನವಾಡಿಯ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ತಮಗೆ ಬರುವ ಕಡಿಮೆ ಗೌರವಧನದ ಹಣವನ್ನೂ ಸಂಗ್ರಹಿಸಿಟ್ಟು, ಅದೇ ಹಣದಲ್ಲಿ ಅಂಗನವಾಡಿಗೆ ಬಣ್ಣ ಬಳಿದಿದ್ದಾರೆ. ಮಾತ್ರವಲ್ಲದೆ, ಅಂಗನವಾಡಿ ಗೋಡೆಗಳಿಗೆ ಆಕರ್ಷಣೀಯ ಚಿತ್ರಗಳನ್ನೂ ಬಿಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X