ಹುಬ್ಬಳ್ಳಿ-ಧಾರವಾಡ ಮಧ್ಯೆ ಪ್ರಾಯೋಗಿಕ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

Date:

Advertisements

ಹುಬ್ಬಳ್ಳಿ-ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದರು.

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಈ ವೇಳೆ ಸಹಿ ಹಾಕಲಾಯಿತು.

Advertisements

ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.

ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು. ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಇಎಸ್ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X