ಬೀದರ್‌ ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮ

Date:

Advertisements

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏಪ್ರಿಲ್ 14 ರಂದು ಸಾಯಂಕಾಲ 5 ಗಂಟೆಗೆ‌ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮುಂಡರಗಿ ಹಾಗೂ ನಿಷ್ಕಲ ಮಂಟಲ ಬೈಲೂರಿನ ತೋಂಟದಾರ್ಯ ಮಠದ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹಾಗೂ ಆಣದೂರ ವೈಶಾಲಿ ನಗರ ಬುದ್ಧ ವಿಹಾರದ ಪೂಜ್ಯ ಭಂತೆ ಜ್ಞಾನಸಾಗರ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ನೆರೆವೇರಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಭಾಗವಹಿಸಲಿದ್ದಾರೆ

ಮದ್ಯ ಮಾರಾಟ ನಿಷೇಧ :

ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಶಾಂತಿಯುವಾಗಿ ಆಚರಿಸಲು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ21ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಏಪ್ರಿಲ್ 13ರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆಯವರೆಗೆ ಬೀದರ್ ನಗರ ಪ್ರದೇಶದಲ್ಲಿ ಮಾತ್ರ (ಕೆಎಸ್‌ಬಿಸಿಎಲ್ ಡಿಪೋ ಹೊರತುಪಡಿಸಿ) ಎಲ್ಲ ವಿಧದ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದ ಶಿಲ್ಪಾ ಶರ್ಮಾ ಅವರು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X