ಶಿವಮೊಗ್ಗ | ಭದ್ರಾವತಿ ಬಾಬಾ ಸಾಹೇಬರ ವಿಚಾರಧಾರೆ ಮೈಗೂಡಿಸಿಕೊಳ್ಳಿ: ಡಾ. ಸಿದ್ದರಾಜು

Date:

Advertisements

ಡಾ. ಬಿ. ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಿ ಎಂದು ಡಾ. ಸಿದ್ದರಾಜು ಇಂದು ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು.

ಡಾ. ಬಿ. ಆ‌ರ್. ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ (ರಿ), ಭದ್ರಾವತಿಯ ಅಡಿಯಲ್ಲಿ ನಡೆಯುತ್ತಿರುವ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 12-04-2025 ರಂದು ಡಾ. ಬಿ. ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಬಿ.ಇಡಿ ಕಾಲೇಜುಗಳ ಡಾ. ಬಿ. ಆರ್ ಅಂಬೇಡ್ಕರವರ ವಿಚಾರಧಾರೆಗಳ ಕುರಿತು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅರಳಿಹಳ್ಳಿ ಅಣ್ಣಪ್ಪ, ಭಾಷಾ ಶಿಕ್ಷಕರು. ಸರ್ಕಾರಿ ಪ್ರೌಢಶಾಲೆ ಅರಕೆರೆರವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಶ್ರೀಯುತರು, ಅಂತರ ಬಿ.ಇಡಿ ಕಾಲೇಜುಗಳ ಸ್ಪರ್ದೆ ಏರ್ಪಡಿಸಿರುವುದು ಶ್ಲಾಘನೀಯ, ಇಂದಿನ ಜಗತ್ತಿನಲ್ಲಿ ಯುವಜನತೆಯು ಮೊಬೈಲ್‌ನಲ್ಲಿ ಸಮಯ ಕಳೆಯುತ್ತಿದ್ದು, ಆದರ್ಶ, ಮಹಾನ್ ನಾಯಕರಾದಂತಹ ಡಾ.ಬಿ.ಆರ್ ಅಂಬೇಡ್ಕ‌ರ್, ಬುದ್ಧ, ಬಸವಣ್ಣನವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು, ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಂಡು, ಇತರರಿಗೆ ಮಾದರಿಯಾಗಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶಿಕ್ಷಕರಾದ ಸುದೀಂದ್ರ ರೆಡ್ಡಿ, ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜ್ಞಾನವನ್ನು ಗಳಿಸಿಕೊಳ್ಳುವುದರ ಜೊತೆಗೆ ಇಂದಿನ ಆಧುನಿಕ ಜಗತ್ತಿಗೆ ಅವಶ್ಯಕವಾದ ಸಂವಹನ ಕೌಶಲ್ಯಗಳನ್ನು, ಕಲಿತು ವೃತ್ತಿ ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

Advertisements

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದಂತಹ ಡಾ.ಸಿದ್ದರಾಜು, ಇಂದಿನ ಜಗತ್ತಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ವಿಚಾರಧಾರೆಗಳು ಎಂದೆಂದಿಗೂ ಅತ್ಯವಶ್ಯಕ. ಡಾ.ಬಿ.ಆರ್ ಅಂಬೇಡ್ಕರ್‌ರವರ ಚಿಂತನೆಗಳೇ ನಮಗೆ ದಾರಿದೀಪ, ಎಲ್ಲರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಆ ನಿಟ್ಟಿನಲ್ಲಿ ಭಾವೀ ಶಿಕ್ಷಕರರಾಗುವ ತಾವೆಲ್ಲರೂ ಜ್ಞಾನದ ಜೊತೆ ವೃತ್ತೀಯ ಕೌಶಲ್ಯಗಳಾದ ಸಂವಹನ, ಚಿತ್ರಕಲೆ, ಭಾಷಣ ಕಲೆಗಳನ್ನು ಕಲಿತು, ವಿವಿಧ ರಂಗಗಳಲ್ಲಿ ಸಾಧನೆ ಮಾಡುವ ಮೂಲಕ ಮಾನಸಿಕ ನೆಮ್ಮದಿ, ಸಂತೋಷದ ಜೀವನವನ್ನು ನಡೆಸಲು ಕಾರಣವಾಗಲಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಬಿ.ಇಡಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳು ಮತ್ತು ಉಪನ್ಯಾಸಕರುಗಳು, ಹಾಗೂ ನಿರ್ದೇಶಕರಾದ ನೇತ್ರಾವತಿ ಸುಭಾಷ್, ಸಾವಿತ್ರಿ ಗಣೇಶಪ್ಪ, ಹನುಮಂತಪ್ಪ ಎಸ್. ಸಂಶೋಧಕರು, ಪವನ್‌ರಾಜ್, ಪ್ರಜ್ವಲ್ ಕುಮಾರ್, ತೀರ್ಪುಗಾರರಾಗಿ ನಾಗೇಶ್ ಮುಖ್ಯಶಿಕ್ಷಕರು, ಹೊಸಮನೆ, ತಮಟೆ ಜಗದೀಶ್, ಕಲಾವಿದರು, ಭದ್ರಾವತಿ ಶ್ರೀಯುತ ಶಿವಕುಮಾರ್, ಚಿತ್ರಕಲಾ ಶಿಕ್ಷಕರು, ಡಾ.ವೈ.ಕೆ. ಹನುಮಂತಯ್ಯ, ಹಿರಿಯ ರಂಗ ಕಲಾವಿದರು ಭದ್ರಾವತಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X