ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ. ಇದೀಗ ಶನಿವಾರ ಮತ್ತೆ ಹಿಂಸಾಚಾರ ನಡೆದಿದೆ. ಬಿಎಸ್‌ಎಫ್ ನಡೆಸಿದ ಗುಂಡಿನ ದಾಳಿಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇವೆಲ್ಲವುದರ ನಡುವೆ ರಾಜ್ಯದಲ್ಲಿ ಈ ವಿವಾದಿತ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಭರವಸೆ ನೀಡಿದ್ದಾರೆ.
