ಮದುವೆಯಾಗುವ ಭರವಸೆ ನೀಡಿ ವೈದ್ಯ ಮೇಲೆ (ಭಾರತೀಯ ಪೊಲೀಸ್ ಸೇವೆ) ಐಪಿಎಸ್ ಅಧಿಕಾರಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ
ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರಕರಣ ನಡೆದಿದೆ. ಸಂತ್ರಸ್ತ ವೈದ್ಯೆ ನಾಗ್ಪುರದ ಇಮಾಮ್‌ವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೈದ್ಯೆಗೆ ಆರೋಪಿ ಐಪಿಎಸ್ ಅಧಿಕಾರಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಸಂಪರ್ಕಕ್ಕೆ ಬಂದಿದ್ದರು. ಪರಿಚಯವಾದಾಗ ಆತ ಯುಪಿಎಸ್‌ಸಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ. ಇದೇ ಸಮಯದಲ್ಲಿ, ವೈದ್ಯೆಯೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿ ಅಧಿಕಾರಿ, ಮದುವೆಯಾಗುವ ಪ್ರಸ್ತಾಪ ಇಟ್ಟಿದ್ದರು. ಇಬ್ಬರೂ ಮದುವೆಗೆ ಒಪ್ಪಿದ್ದರು. ವಿವಾಹದ ಭರವಸೆಯ ನೀಡಿದ್ದ ಅಧಿಕಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ನಂತರದಲ್ಲಿ, ಆತ ಐಪಿಎಸ್ ಹುದ್ದೆಗೆ ಆಯ್ಕೆಯಾದ ಬಳಿಕ, ಮಹಿಳೆಯಿಂದ ಅಂತರ ಕಾಯ್ದುಕೊಂಡಿದ್ದು, ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆಯು ಆರೋಪಿಯ ಪೋಷಕರನ್ನೂ ಸಂಪರ್ಕಿಸಿದ್ದಾರೆ. ಆದರೆ, ಅವರು ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ. ಆರೋಪಿ ಅಧಿಕಾರಿಯಿಂದ ನೊಂದ ವೈದ್ಯ ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.