ರಾಜ್ಯದ ನಾನಾ ಭಾಗಗಳಲ್ಲಿ ಲೋಕಾಯುಕ್ತ ದಾಳಿ

Date:

Advertisements

ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ತುಮಕೂರು, ಕಲಬುರಗಿ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆ.ಆರ್‌ ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮನೆ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಬ್ಬರು ಕೃಷಿ ಇಲಾಖೆ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ನಗರದ ವಿದ್ಯಾಗಿರಿಯಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ಅಬಕಾರಿ ಇಲಾಖೆ ನಿರೀಕ್ಷಕ ವಿ‌‌.ರಮೇಶ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿಯೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಯಾದಗಿರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಇಇ ವಿಶ್ವನಾಥ ರೆಡ್ಡಿ, ರಾಯಚೂರಿನ ನಗರ ಯೋಜನಾ ಶಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಹಾಗೂ ಬೆಳಗಾವಿಯ ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ಶೇಖರ ಬಹುರೂಪಿ ಅವರ ನಿವಾಸಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ರವಿ, ಮಡಿಕೇರಿಯಲ್ಲಿ ಕುಡಿಯುವ ನೀರು‌ ಮತ್ತು ನೈರ್ಮಲ್ಯ ವಿಭಾಗದ ಎಫ್‌ಡಿಎ ಮಹಮ್ಮದ್ ಬಷೀರ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಪ್ರಭಾರ ಎಇಇ ಭೀಮನಗೌಡ ಬಿರಾದಾರ, ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಎಂಜಿನಿಯರ್ ಜೆ.ಪಿ.ಶೆಟ್ಟಿ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X