ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್‌ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ. ಘಟನೆ ಕುರಿತು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಗೃಹ ಸಚಿವೆ ವಿ ಅನಿತಾ ಭೇಟಿ ನೀಡಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆ. ಅವರನ್ನು ಕಳುಹಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ನಿಖರ ಕಾರಣ ಗೊತ್ತಾಗಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.