ದಾವಣಗೆರೆ | ವಕ್ಫ್ ತಿದ್ದುಪಡಿ ವಿರುದ್ಧ ಪ್ರಚೋದನಕಾರಿ ಹೇಳಿಕೆ, ಪಾಲಿಕೆ ಮಾಜಿ ಸದಸ್ಯ ಕಬೀರ್ ಬಂಧನ.

Date:

Advertisements

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು, “ರೈಲು,ವಾಹನ ಬಸ್ಸಿಗೆ ಬೆಂಕಿ ಇಡಬೇಕು, ದಂಗೆ ಏಳಬೇಕು” ಎಂಬ ದುಷ್ಕೃತ್ಯದ ಹೇಳಿಕೆ ನೀಡಿದ್ದ ದಾವಣಗೆರೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯ ಕಬೀರ್ ಖಾನ್ ಅಲಿಯಾಸ್ ಕಬೀರ್ ಅಹ್ಮದ್ ಖಾನ್ ನನ್ನು ರಾಜಸ್ತಾನದ ಅಜ್ಮೀರ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.‌

ವಿವಾದಿತ ವೀಡಿಯೋ ಹರಿಬಿಟ್ಟಿದ್ದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಆರೋಪಿ ಕಬೀರ್ “ವಕ್ಫ್ ಮಸೂದೆಗೆ ತಿದ್ದುಪಡಿ ಮಾಡಿರುವುದನ್ನು ನಾವು ಒಪ್ಪುವುದಿಲ್ಲ. ಕೇವಲ ಪ್ರತಿಭಟನೆ ನಡೆಸಿದರೆ, ಬ್ಯಾನರ್ ಹಿಡಿದು ಓಡಾಡಿದರೆ ಏನೂ ಆಗಲ್ಲ. ಸಿಎಂ, ಡಿಸಿಎಂ, ಡಿಸಿಗೆ ಮನವಿ ಕೊಟ್ಟರೆ ಬೇಡಿಕೆ ಈಡೇರಲ್ಲ. ಎಲ್ಲರೂ ರಸ್ತೆಗೆ ಇಳಿಯಬೇಕು. ಏನ್ ಬೇಕಾದರೂ ಮಾಡಿ. ಬೆಂಕಿ ಇಡಿ, ಸಾಯಿರಿ. ಜೀವಗಳನ್ನು ಬಲಿ ಕೊಡಬೇಕು” ಎಂದು ಹೇಳಿದ್ದ ಎನ್ನಲಾಗಿದೆ.

“ಬಸ್ ಗೆ, ರೈಲಿಗೆ ಬೆಂಕಿ ಇಡಬೇಕು. ಕೆಲವನ್ನು ಹೇಳದೆಯೇ ಮಾಡಬೇಕು. ಯೋಜನೆ ರೂಪಿಸಿ ಮಾಡುವುದಲ್ಲ. ಊರಿನ ಪ್ರಮುಖರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಭಾರತದಲ್ಲಿ ನಮಗೆ ಯಾವ ನಾಯಕ ಇಲ್ಲ. ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಬಂದ್ ಮಾಡಿ, ಬೆಂಕಿ ಇಡಿ, ಒಡೆದು ಹಾಕಿ, ಮುರಿದು ಹಾಕಿ. ಏನೇ ಆದರೂ ತಲೆಕೆಡಿಸಿಕೊಳ್ಳಬೇಡಿ. ಗ್ರಾಮದಲ್ಲಿ 10ರಿಂದ 15 ಜನ ಸಾಯಬೇಕು. ತಲೆಹೊಡೆಯೋ ಕೆಲಸ ಮಾಡಬೇಕು” ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದ.

Advertisements

ತಿದ್ದುಪಡಿ ಮಸೂದೆ ವಿರೋಧಿಸುವ ವೇಳೆ ಸಮಾಜದಲ್ಲಿ ಅಶಾಂತಿ ಉಂಟುಮಾಡುವ, ಸಾಮರಸ್ಯಕ್ಕೆ ಧಕ್ಕೆ ತರುವ ಕಬೀರ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು
ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿಬಂದಿತ್ತು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ. ಅಲರ್ಟ್ ಆಗಿದ್ದ ಪೊಲೀಸರು ಕೂಡ ಮಾಹಿತಿ ಸಂಗ್ರಹಿಸುತ್ತಿದ್ದರು.

ಪೊಲೀಸರು ಆರೋಪಿಯ ಬಂಧನಕ್ಕೆ ಮಾಹಿತಿ ಕಲೆಹಾಕಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಜ್ಮೀರ್ ನಲ್ಲಿರುವ ಕುರಿತು ಮಾಹಿತಿ ದೊರೆತಿತ್ತು. ಕೂಡಲೇ ಪೊಲೀಸ್ ಹಿರಿಯ ಅಧಿಕಾರಿಗಳು ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನಿರ್ದೇಶನದಂತೆ ರಾಜಸ್ಥಾನದ ಅಜ್ಮೀರ್ ಗೆ ತೆರಳಿದ ದಾವಣಗೆರೆ ನಗರದ ಆಜಾದ್ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಗಳು ಆರೋಪಿ ಕಬೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ದಾವಣಗೆರೆಗೆ ಕರೆತಂದಿದ್ದಾರೆ. ಮತ್ತು ವಿಡಿಯೋ ಹರಿಬಿಟ್ಟ ಕುರಿತಂತೆ ವಿಚಾರಣೆಯನ್ನು ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಮದ್ಯ ಮಾರಾಟ; ದಸಂಸ ನೇತೃತ್ವದಲ್ಲಿ ಮಹಿಳೆಯರ ಪ್ರತಿಭಟನೆ.

ಈ ಕುರಿತು ಮಾಹಿತಿ ನೀಡಿದ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ರವಿಕಾಂತೇಗೌಡ
“ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪಿ ಕಬೀರ್ ಖಾನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಮಾಹಿತಿ ಕಲೆ ಹಾಕಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಖಚಿತಪಡಿಸಿದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X